ಬಂಟ್ವಾಳ:  ಅರೆಸ್ಸೆಸ್ ಕಾರ್ಯಕರ್ತ, ಬಿ.ಸಿ. ರೋಡಿನ ಉದಯ ಲಾಂಡ್ರಿ ಮಾಲಕ ಶರತ್ ಮೇಲಿನ ದಾಳಿ ಹಾಗೂ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹಿಂದುಗಳ ಮೇಲಿನ ದೌರ್ಜನ್ಯ ಖಂಡಿಸಿ ಹಿಂದು ಹಿತರಕ್ಷಣಾ ಸಮಿತಿ ಇಂದು ಬಿ.ಸಿ. ರೋಡ್ ಬಸ್ ನಿಲ್ದಾಣದಲ್ಲಿ ಉಗ್ರ ಪ್ರತಿಭಟನೆ ನಡೆಸುವ ಮೂಲಕ ಸರಕಾರ ಹಾಗೂ ಸ್ಥಳಿಯಾಡಳಿತಕ್ಕೆ ಬಿಸಿ ಮುಟ್ಟಿಸಿದೆ.ಬೆಳಿಗ್ಗೆ 11 ಗಂಟೆ ಸುಮಾರಿಗೆ ಬಿ.ಸಿ. ರೋಡಿನಲ್ಲಿ ಜೊತೆಯಾದ ಸಾವಿರಾರು ಸಂಖ್ಯೆಯ ಹಿಂದು ಸಂಘಟನೆಗಳ ಕಾರ್ಯಕರ್ತರು, ಸರಕಾರ, ಸಚಿವ ರಮಾನಾಥ ರೈ, ಯು.ಟಿ. ಖಾದರ್ ವಿರುದ್ಧ ಘೋಷಣೆ ಕೂಗಿದರು. ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಸಂಸದರುಗಳಾದ ನಳಿನ್ ಕುಮಾರ್ ಕಟೀಲ್, ಶೋಭಾ ಕರಂದ್ಲಾಜೆ, ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಕ್ಯಾ. ಗಣೇಶ್ ಕಾರ್ಣಿಕ್, ಶಾಸಕರುಗಳಾದ ಎಸ್. ಅಂಗಾರ, ಆರೆಸ್ಸೆಸ್ ಮುಖಂಡ ಪಿ.ಎಸ್. ಪ್ರಕಾಶ್, ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ, ಸುಲೋಚನಾ ಜಿ.ಕೆ. ಭಟ್, ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಸಹಿತ ವಿವಿಧ ಟನೆಗಳ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿ ಸರಕಾರದ ಆಡಳಿತ ವೈಫಲ್ಯವನ್ನು ಉಗ್ರವಾಗಿ ಖಂಡಿಸಿದರು.KAR_6718 (1)

ಹಿಂದು ಸಂಘಟನೆಗಳ ಕಾರ್ಯಕರ್ತರನ್ನು ಗುರಿಯಾಗಿಸಿ ಅವರ ಮೇಲೆ ಸುಳ್ಳು ಕೇಸ್ ಹಾಕಲಾಗುತ್ತಿದೆ. ಈ ಮೂಲಕ ರಾಜ್ಯ ಸರಕಾರ ಹಿಂದೂ ದಮನ ನೀತಿಯನ್ನು ಅನುಸರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸದರು. ಶರತ್ ಮೇಲೆ ದಾಳಿ ನಡೆಸಿದ ಕಿಡಿಗೇಡಿಗಳನ್ನು ತಕ್ಷಣವೇ ಬಂಧಿಸಬೇಕೆಂದು ಆಗ್ರಹಿಸಿದರು.
ನಮ್ಮ ತಾಳ್ಮೆಯ ಕಟ್ಟೆ ಒಡೆದಿದೆ ಜಿಲ್ಲೆಯಲ್ಲಿ ಹಿಂದೂ ಸಮಾಜದ ವ್ಯಕ್ತಿಗಳನ್ನು ಗುರಿಯಾಗಿಸಿ ಮತಾಂಧ ಶಕ್ತಿಗಳು ದಾಳಿ ಮಾಡುತ್ತಿವೆ. ಇದನ್ನು ಯಾರೂ ಕೇಳದ ಪರಿಸ್ಥಿತಿ ಎದುರಾಗಿದೆ. ಕಾನೂನಿನ ಮೇಲಿನ ಗೌರವದಿಂದ ಕಳೆದ ಬಾರಿ ನಡೆಯಬೇಕಿದ್ದ ಪ್ರತಿಭಟನೆಯನ್ನು ಮುಂದೂಡಿದ್ದೇವೆ. ಆದರೆ ಹಿಂದುಗಳ ತಾಳ್ಮೆಯ ಕಟ್ಟೆ ಒಡೆದಿದ್ದು, ಹಿಂದೂ ಸಮಾಜ ನೋವಿನಿಂದ ಮಡುಗಟ್ಟಿದೆ. ಈ ನೋವನ್ನು ತೋರ್ಪಡಿಸಲು ಪ್ರತಿಭಟನೆ ನಡೆಸುವುದು ಅನಿವಾರ್ಯವಾಗಿದೆ ಎಂದು ಪ್ರತಿಭಟನಾ ನಿರತರು ಹೇಳಿದರು. ಪ್ರತಿಭಟನಾ ಸ್ಥಳಕ್ಕೆ ಆರೆಸ್ಸೆಸ್ ಮುಖಂಡ ಡಾ. ಪ್ರಭಾಕರ ಭಟ್ ಕಲ್ಲಡ್ಕ ಭೇಟಿ ನೀಡಿದ್ದರು.
ಅಂಗಡಿ ಮುಂಗಟ್ಟು ಬಂದ್ಪ್ರತಿಭಟನೆಯ ಹಿನ್ನೆಲೆಯಲ್ಲಿ ಬಿ.ಸಿ. ರೋಡ್ ಪರಿಸರದಲ್ಲಿ ಅಂಗಡಿ ಮುಂಗಟ್ಟು ಬಂದ್ ಮಾಡಿ ಬೆಂಬಲ ಸೂಚಿಸಲಾಯಿತು. ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡ ಪ್ರತಿಭಟನಾ ನಿರತರು, ಪ್ರತಿಭಟನೆಯುದ್ದಕ್ಕೂ ಸರಕಾರದ ವಿರುದ್ಧ ಘೋಷಣೆ ಕೂಗಿದರು.
ಪೊಲೀಸ್ ಸರ್ಪಗಾವಲು ನಿಷೇಧಾಜ್ಞೆ ನಡುವೆಯೂ ಪ್ರತಿಭಟನೆ ನಡೆದ ಹಿನ್ನೆಲೆಯಲ್ಲಿ ಭಾರೀ ಸಂಖ್ಯೆಯ ಪೊಲೀಸರು ಸ್ಥಳದಲ್ಲಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಿದರು.
ಪ್ರತಿಭಟನಾ ನಿರತರ ಬಂಧನ ನಿಷೇಧಾಜ್ಞೆ ನಡುವೆ ಪ್ರತಿಭಟನೆ ನಡೆಸಿದ ಆರೋಪದಲ್ಲಿ ಸಂಸದರು, ಶಾಸಕರ ಸಹಿತ ಸಂಘಟನೆಗಳ ಮುಖಂಡರನ್ನು ಪೊಲೀಸರು ಬಂಧಿಸಿ ಬಳಿಕ ಬಿಡುಗಡೆಗೊಳಿಸಿದರು.

By suddi9

Leave a Reply

Your email address will not be published. Required fields are marked *