12bhacbhandary: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಂಟ್ವಾಳ ತಾಲೂಕಿನ ಜನಜಾಗೃತಿ ವೇದಿಕೆ ಸಭೆ ಬಂಟ್ವಾಳ ಯೋಜನಾ ಕಚೇರಿಯಲ್ಲಿ ನಡೆಯಿತು.ತಾಲೂಕಿನ ಜನಜಾಗೃತಿ ವೇದಿಕೆ ಅಧ್ಯಕ್ಷ ಪ್ರಕಾಶ ಕಾರಂತ ಅಧ್ಯಕ್ಷತೆ ವಹಿಸಿದ್ದರು. 2017-18ನೇ ಸಾಲಿನ ತಾಲೂಕಿನಜನಜಾಗೃತಿ ವೇದಿಕೆಯಕ್ರಿಯಾಯೋಜನೆ ಬಗ್ಗೆ, ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿ ಸಹಕಾರ ಕೋರಿದರು.ಯೋಜನೆಯ ದ.ಕ. ಜಿಲ್ಲಾ ನಿರ್ದೇಶಕ ಚಂದ್ರಶೇಖರ್ ಕೆ ಮಾತನಾಡಿ ಬಂಟ್ವಾಳದಲ್ಲಿ ಜನಜಾಗೃತಿ ವೇದಿಕೆ ಮೂಲಕ ನಡೆದ ಕಾರ್ಯಕ್ರಮಗಳನ್ನು ಶ್ಲಾಘಿಸಿದರು.ತಾಲೂಕಿನ ಯೋಜನಾಧಿಕಾರಿ ಸುನೀತಾ ನಾಯಕ್ ತಾಲೂಕು ಜನಜಾಗೃತಿ ವೇದಿಕೆಯ ಗುರಿ ಸಾಧನೆಯ ಬಗ್ಗೆ ತಿಳಿಸಿದರು.

ಬಂಟ್ವಾಳ ತಾಲೂಕಿನ ಜನಜಾಗೃತಿ ವೇದಿಕೆ ಸ್ಥಾಪಕಾಧ್ಯಕ್ಷ ಎ.ಸಿ ಭಂಡಾರಿ ಸಭೆಯನ್ನು ಉದ್ದೇಶಿಸಿ ಮಾತನಾಡಿ, ಅಕ್ಟೋಬರ್ 2ರಂದು ತಾಲೂಕು ಮಟ್ಟದ ನವಜೀವನ ಸಮಿತಿಯ ಸಮಾವೇಶ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು. ನಿಕಟಪೂರ್ವ ಅಧ್ಯಕ್ಷ ಕಿರಣ್ ಹೆಗ್ಡೆ, ಕೈಯೂರು ನಾರಾಯಣ ಭಟ್ ಉಪಸ್ಥಿತರಿದ್ದರು. ಕೃಷಿ ಅಧಿಕಾರಿ ನಾರಾಯಣ ಕೆ ಸ್ವಾಗತಿಸಿ ಮೇಲ್ವಿಚಾರಕಿ ಮಮತಾ ವಂದಿಸಿದರು.

By suddi9

Leave a Reply

Your email address will not be published. Required fields are marked *