ಬಂಟ್ವಾಳ; ಕರ್ನಾಟಕ ತುಳು ಸಾಹಿತ್ಯ ಆಕಾಡೆಮಿಗೆ ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಯಾದ ಎ.ಸಿ ಭಂಡಾರಿ ಅವರು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾI ಡಿ.ವೀರೇಂದ್ರ ಹೆಗ್ಗಡೆ ಇವರನ್ನು ಭೇಟಿ ಯಾಗಿಆರ್ಶಿವಾದ ಪಡೆದರು. ಈ ಸಂದರ್ಭದಲ್ಲಿ ಅಖಿಲ ಭಾರತ ತುಳು ಒಕ್ಕೂಟದ ಪ್ರಧಾನ ಕಾರ್ಯದರ್ಶಿ ನಿಟ್ಟೆ ಶಶಿಧರ ಶೆಟ್ಟಿ, ಬಂಟ್ವಾಳ ತುಳು ಒಕ್ಕೂಟದ ಉಪಾಧ್ಯಕ್ಷ ಸುದರ್ಶನ್ ಜೈನ್ ಉಪಸ್ಥಿತರಿದ್ದರು.