ಮುತ್ತೂರು: ಸರ್ಕಾರಿ ಸಂಯುಕ್ತ ಪದವಿಪೂರ್ವ ಕಾಲೇಜು ಮುತ್ತೂರಿನಲ್ಲಿ ಶಿಕ್ಷಕರ ದಿನಾಚರಣೆಯನ್ನು ಡಾ.ಸರ್ವಪಲ್ಲಿ ರಾಧಾಕೃಷ್ಣನ್ ರವರ ಭಾವಚಿತ್ರಕ್ಕೆ ದೀಪ ಪ್ರಜ್ವಲಿಸಿ, ಪುಷ್ಪಾರ್ಚನೆಯನ್ನು ಮಾಡುವುದರ ಮೂಲಕ ಆಚರಿಸಲಾಯಿತು. Teachers day
ಆರಂಭದಲ್ಲಿ ವಿದ್ಯಾರ್ಥಿಗಳು ಉಪನ್ಯಾಸಕರಿಗೆ ಹಲವಾರು ಆಟೋಟ ಸ್ಪರ್ಧೆಗಳನ್ನು ನಡೆಸಿದರು. ನಂತರ ನಡೆದ ಸಭಾಕಾರ್ಯಕ್ರಮದಲ್ಲಿ ಬಹುಮಾನ ವಿತರಣೆ ನಡೆಸಲಾಯಿತು. ವಿದ್ಯಾರ್ಥಿಗಳಾದ ಆಭಿಷೇಕ್, ಕವಿತಾ ಹಾಗೂ ಅಮ್ರೀನಾ, ಉಪನ್ಯಾಸಕರಾದ ಕು.ಅಮೃತಾ ಶಿಕ್ಷಕರ ದಿನಾಚರಣೆಯ ಬಗ್ಗೆ ಮಾತನಾಡಿದರು. ಈ ಸಂದರ್ಭದಲ್ಲಿ ಸಂಸ್ಥೆಯ ರಾಜ್ಯಶಾಸ್ತ್ರ ಉಪನ್ಯಾಸಕಿ ಶ್ರೀಮತಿ ರಂಜಿತಾ ರವರನ್ನು ಸಂಸ್ಥೆಯ ಪರವಾಗಿ“ಆದರ್ಶ ಉಪನ್ಯಾಸಕಿ“ ಎಂಬ ಬಿರುದಿನೊಂದಿಗೆ ಸಮ್ಮಾನಿಸಲಾಯಿತು. ವಿದ್ಯಾರ್ಥಿಗಳು ಆಯೋಜಿಸಿದ್ದ ಈ ವಿಶೇಷ ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯತ್ ಸದಸ್ಯರಾದ ಶ್ರೀ ನಾಗೇಶ್ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶುಭ ಹಾರೈಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಶ್ರೀ ನಿರಂಜನ್ ಎ. ರವರು ವಹಿಸಿದ್ದರು. ಕು. ನಿಶಾ ನಿರ್ವಹಿಸಿದ ಕಾರ್ಯಕ್ರಮದಲ್ಲಿ ಕು.ಫಾತಿಮತ್ ನುಸುರಾ ಸ್ವಾಗತಿಸಿದರು ಹಾಗೂ ಆಶಿಕ್ ವಂದಿಸಿದರು.

By suddi9

Leave a Reply

Your email address will not be published. Required fields are marked *