ಬಂಟ್ವಾಳ ತಾಲ್ಲೂಕಿನ ವಾಮದಪದವು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ಏರ್ಪಡಿಸಿದ್ದ ವಿದ್ಯಾರ್ಥಿ ಕ್ಷೇಮಪಾಲನಾ ವೇದಿಕೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಕಾಲೇಜಿನ ವಾರ್ಷಿಕ ವಿಶೇಷ ಸಂಚಿಕೆ ಬಿಡುಗಡೆಗೊಳಿಸಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷ ಯತಿನ್ ಶೆಟ್ಟಿ, ಜಿಲ್ಲಾ ಪಂಚಾಯಿತಿ ಸದಸ್ಯ ಬಿ.ಪದ್ಮಶೇಖರ ಜೈನ್, ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ಅಬ್ಬಾಸ್ ಆಲಿ, ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಕೆ.ಮಾಯಿಲಪ್ಪ ಸಾಲ್ಯಾನ್ ಮತ್ತಿತರರು ಇದ್ದಾರೆ.