ಬಂಟ್ವಾಳ:ದೇಶದಲ್ಲಿ 130 ಕೋಟಿ ಜನರ ಆಶಯದಂತೆ ಜಗತ್ತು ಕಂಡ ಬಲಿಷ್ಠ ಮತ್ತು ದೇಶಪ್ರೇಮಿ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸುವ ಮೂಲಕ ಕಾಂಗ್ರೆಸ್ ಮುಕ್ತ ರಾಜ್ಯವನ್ನಾಗಿಸಲು ಬಂಟ್ವಾಳ ಮತ್ತು ಮೂಡುಬಿದ್ರೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ದಾಖಲಿಸಬೇಕು ಎಂದು ಬಿಜೆಪಿ ಜಿಲ್ಲಾ ವಕ್ತಾರ ಕೆ.ಹರಿಕೃಷ್ಣ ಬಂಟ್ವಾಳ್ ಹೇಳಿದ್ದಾರೆ.
ತಾಲ್ಲೂಕಿನ ರಾಯಿಯಲ್ಲಿ ಬಿಜೆಪಿ ಮುಖಂಡ ಉಳಿಪಾಡಿಗುತ್ತು ರಾಜೇಶ ನಾಯ್ಕ್ ನೇತೃತ್ವದಲ್ಲಿ ಸೋಮವಾರ ರಾತ್ರಿ ನಡೆದ ಬಂಟ್ವಾಳ ಪರಿವರ್ತನೆಗಾಗಿ ಬಿಜೆಪಿ ಗ್ರಾಮನಡಿಗೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ನೆಮ್ಮದಿ ಮತ್ತು ಅಭಿವೃದ್ಧಿ ಪರ ನಿಲುವು ಹೊಂದಿರುವ ಬಿಜೆಪಿ ಗೆದ್ದು, ಅಹಂಕಾರದಿಂದ ಕೂಡಿದ ಕಾಂಗ್ರೆಸ್ಸಿಗರ ಕಾಂಗ್ರೆಸ್ಸಿನ ಮರ ಮತ್ತು ಮರಳು ದಂಧೆಗೆ ಕಡಿವಾಣ ಹಾಕಬೇಕು ಎಂದರು.
ಜಿಲ್ಲಾ ಉಪಾಧ್ಯಕ್ಷ ಕೆ.ಪಿ.ಜಗದೀಶ ಅಧಿಕಾರಿ ಮಾತನಾಡಿ, ಬಂಟ್ವಾಳ ಮತ್ತು ಮೂಡುಬಿದ್ರೆ ಕ್ಷೇತ್ರದಲ್ಲಿ ಬಿಜೆಪಿ ಜಯಗಳಿಸಬೇಕು ಎಂದರು.ಬಿಜೆಪಿ ಮುಖಂಡ ಉಳಿಪಾಡಿಗುತ್ತು ರಾಜೇಶ ನಾಯ್ಕ್ ಮಾತನಾಡಿ, ದೇಶದಲ್ಲಿ ಅಭಿವೃದ್ಧಿ ಪರ್ವ ಆರಂಭಗೊಂಡಿದೆ ಎಂದರು. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮೂಢನಂಬಿಕೆ ನೆಪದಲ್ಲಿ ಹಿಂದೂಗಳ ಮೂಲ ನಂಬಿಕೆಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿದರು.
ಕ್ಷೇತ್ರ ಬಿಜೆಪಿ ಸಮಿತಿ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಸಹ ವಕ್ತಾರೆ ಸುಲೋಚನಾ ಜಿ.ಕೆ.ಭಟ್, ಜಿಲ್ಲಾ ಪಂಚಾಯಿತಿ ಸದಸ್ಯ ಎಂ.ತುಂಗಪ್ಪ ಬಂಗೇರ, ಕ್ಷೇತ್ರ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ ಮತ್ತಿತರರು ಮಾತನಾಡಿದರು. ರಾಯಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ದಯಾನಂದ ಸಪಲ್ಯ, ಉಪಾಧ್ಯಕ್ಷ ಪುಷ್ಪಲತಾ, ಪ್ರಮುಖರಾದ ಮೋನಪ್ಪ ದೇವಸ್ಯ. ದೇವಪ್ಪ ಪೂಜಾರಿ, ಸೀತಾರಾಮ ಪೂಜಾರಿ, ರಮಾನಾಥ ರಾಯಿ, ವಸಂತ ಕುಮಾರ್ ಅಣ್ಣಳಿಕೆ, ದಿನೇಶ ಅಮ್ಟೂರು, ಸಂತೋಷ್ ಕುಮಾರ್ ಬೆಟ್ಟು, ರಾಜಾರಾಮ ನಾಯಕ್, ರತ್ನಕುಮಾರ್ ಚೌಟ, ರೊನಾಲ್ಡ್ ಡಿಸೋಜ, ರಶ್ಮಿತ್ ಶೆಟ್ಟಿ ಕೈತ್ರೋಡಿ, ತುಂಗಮ್ಮ, ಪರಮೇಶ್ವರ ಪೂಜಾರಿ, ಹರೀಶ ಆಚಾರ್ಯ, ನಂದರಾಮ ಶೆಟ್ಟಿ, ಪುರುಷೋತ್ತಮ ಶೆಟ್ಟಿ, ಮಧುಕರ ಬಂಗೇರ ಮತ್ತಿತರರು ಇದ್ದರು. ಇದೇ ವೇಳೆ ಈಚೆಗೆ ನಿಧನರಾದ ಸ್ಥಳೀಯ ಶಾರದೋತ್ಸವ ಸಮಿತಿ ಗೌರವಾಧ್ಯಕ್ಷ ದಿವಂಗತ ಎಂ.ದೇವಪ್ಪ ಶೆಟ್ಟಿ ಮಾವಂತೂರು ಇವರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು. ಗ್ರಾಮ ಪಂಚಾಯಿತಿ ಸದಸ್ಯ ಡೊಂಬಯ ಬಿ.ಅರಳ ಸ್ವಾಗತಿಸಿ, ವಂದಿಸಿದರು.