201

ವಿಜಯಪುರ: ಶಾಲಾ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಬಸ್ ನಲ್ಲಿದ್ದ ನಾಲ್ಕು ಮಕ್ಕಳು ಗಾಯಗೊಂಡಿರುವ ಘಟನೆ ತಾಲೂಕಿನ ಜಂಬಗಿ ಗ್ರಾಮದ ಬಳಿ ಗುರುವಾರ ಬೆಳಗ್ಗೆ ನಡೆದಿದೆ.

ಸಂಸ್ಕಾರ ನ್ಯಾಶನಲ್ ಪಬ್ಲಿಕ್ ಶಾಲೆಗೆ ಸೇರಿದ ವಾಹನ ಎಂದು ಗುರುತಿಸಲಾಗಿದ್ದು, ಮಕ್ಕಳನ್ನು ಶಾಲೆಗೆ ಕರೆತರುವ ವೇಳೆ ಈ ಅವಘಡ ನಡೆದಿದೆ. 10 ಕ್ಕೂ ಶಾಲಾ ಮಕ್ಕಳು ವಾಹನದಲ್ಲಿದ್ದರು ಎಂದು ತಿಳಿದು ಬಂದಿದೆ.

ಈ ಬಗ್ಗೆ ವಿಜಯಪುರ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

 

By suddi9

Leave a Reply

Your email address will not be published. Required fields are marked *