ಗದಗ: ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರೊಂದು ಪಲ್ಟಿಯಾದ ಪರಿಣಾಮ ಟ್ರ್ಯಾಕ್ಟರ್ ನಲ್ಲಿದ್ದ ಮಕ್ಕಳು ಸೇರಿ 15ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ನಗರದ ಮುಂಡರಗಿ ರಸ್ತೆಯ ಹೊರವಲಯದಲ್ಲಿ ಗುರುವಾರ ನಡೆದಿದೆ.
ಗಾಯಾಳುಗಳನ್ನು ಕೊಪ್ಪಳ ಜಿಲ್ಲೆಯ ಕವಲೂರ ಗ್ರಾಮದ ಒಂದೇ ಕುಟುಂಬದವರರಾಗಿದ್ದು, ಇವರು ಇಲ್ಲಿನ ಸವದತ್ತಿ ಯಲ್ಲಮ್ಮನ ಜಾತ್ರೆಯಲ್ಲಿ ಭಾಗವಹಿಸಿ ಸ್ವಗ್ರಾಮ ಕವಲೂರು ಗ್ರಾಮಕ್ಕೆ ಹಿಂದಿರುಗುತ್ತಿದ್ದ ವೇಳೆ ಅತಿ ವೇಗದಿಂದ ಚಾಯಿಸಿದ ಚಾಲಕನ ಅಜಾಗರೂಕತೆಯಿಂದ ಈ ಅವಘಡ ನಡೆದಿದೆ ಎಂದು ತಿಳಿದು ಬಂದಿದೆ.
ಇನ್ನು ಗಾಯಾಳುಗಳನ್ನ ನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಬಗ್ಗೆ ನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
