ಶ್ರವಣಬೆಳಗೊಳ: ಸತ್ಯ, ಅಹಿಂಸೆ ಮತ್ತು ತ್ಯಾಗವನ್ನು ನಾಡಿಗೆ ಸಾರಿದ ಮಹಾವೀರರ ತತ್ವ ಮತ್ತು ಆದರ್ಶಗಳನ್ನು ಇಂದಿನ ಜನತೆಗೆ ಅಗತ್ಯವಾಗಿದ್ದು, ಅವುಗಳನ್ನು ಪಾಲನೆ ಮಾಡಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವೆ ಉಮಾಶ್ರೀ ಕರೆ ನೀಡಿದ್ದಾರೆ.
ಶ್ರವಣಬೆಳಗೊಳದಲ್ಲಿ ನಡೆಯುತ್ತಿರುವ ಮಹಾಮಸ್ತಕಾಭಿಷೇಕ ಮಹೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮನುಷ್ಯ ಯಾವುದರ ಬಗ್ಗೆಯೂ ಅತಿಯಾದ ವ್ಯಾಮೋಹವನ್ನು ಬಿಟ್ಟು ತ್ಯಾಗ, ಅಹಿಂಸೆ ಮತ್ತು ಸತ್ಯದಲ್ಲಿ ನಡೆಯುವತ್ತಾ ಭಗವಾನ್ ಮಹಾವೀರರ ಆದರ್ಶಗಳನ್ನು ಪಾಲನೆ ಮಾಡುವತ್ತಾ ಮುಂದಾಗಬೇಕು ಎಂದು ಸಲಹೆ ನೀಡಿದರು.
ಮಹಾವೀರರು ಒಂದು ಧರ್ಮ ಮತ್ತು ಜಾತಿಗೆ ಸೀಮಿತವಾಗದೆ ವಿಶ್ವಕ್ಕೆ ಶಾಂತಿ ಮತ್ತು ಅಹಿಂಸಾ ಮಾರ್ಗವನ್ನು ಅನುಸರಿಸುವಂತೆ ಸಾರಿದ ಮಹಾನ್ ವ್ಯಕ್ಯಿಯಾಗಿದ್ದು, ಇಂದಿನ ಪರಿಸ್ಥಿಗೆ ಅವರ ಆದರ್ಶಗಳು ಅಗತ್ಯವಿದೆ ಎಂದರು.
ಕಾರ್ಯಕ್ರಮದಲ್ಲಿ ಶ್ರಿ ಕ್ಷೇತ್ರದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ, ಜಿಲ್ಲಾ ಉಸ್ತುವಾರಿ ಸಚಿವ ಎ.ಮಂಜು ಮಾತನಾಡಿದರು.
