6899+

ಶ್ರವಣಬೆಳಗೊಳ: ಮಹಾಮಸ್ತಕಾಭಿಷೇಕ ಮಹೋತ್ಸವದ ಹಿನ್ನೆಲೆಯಲ್ಲಿ ರಾಜ್ಯಾಭಿಷೇಕ ಕಾರ್ಯಕ್ರಮಕ್ಕೆ ಆದಿನಾಥ ತೀರ್ಥಂಕರ ಮೂರ್ತಿಗೆ ವಿಧಿ-ವಿಧಾನದಂತೆ ಕಿರೀಟ ತೊಡಿಸಿ ಚಿನ್ನದ ಸರವನ್ನು ಹಾಕುವ ಮೂಲಕ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಚಾಲನೆ ನೀಡಿದರು.

ಚಾವುಂಡರಾಯ ಸಭಾಮಂಟಪದಲ್ಲಿ ಆದಿನಾಥ ತೀರ್ಥಂಕರರಿಗೆ ಪಂಚಕಲ್ಯಾಣ ಮಹೋತ್ಸವ ನಡೆಯುತ್ತಿದ್ದು, ಇಂದು ರಾಜ್ಯಾಭಿಷೇಕ ವಿಜೃಂಭಣೆಯಿಂದ ನೆರವೇರಿತು.

ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಮತ್ತು ವರ್ಧಮಾನ ಸಾಗರ ದಿಗಂಬರ ಮುನಿಗಳು ಸಾನಿಧ್ಯ ವಹಿಸಿದ್ದರು. ರಾಜ್ಯಪಾಲ ವಜುಭಾಯಿವಾಲಾ, ಕೇಂದ್ರ ಸಚಿವ ಅನಂತ್‍ಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಎ.ಮಂಜು, ಶಾಸಕ ಬಾಲಕೃಷ್ಣ ಪಾಲ್ಗೊಂಡಿದ್ದರು.

ಈ ವೇಳೇ ಧಾರ್ಮಿಕ ಪುಸ್ತಕಗಳನ್ನು ಅನಾವರಣಗೊಳಿಸಲಾಯಿತು.

 

By suddi9

Leave a Reply

Your email address will not be published. Required fields are marked *