150218_janga

ಮಂಗಳೂರು:  ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ಆರೋಪಿಯೋರ್ವನನ್ನು ನಗರದ ಕುಂಟಿಕಾನ ಫ್ಲೈ ಓವರ್ ಬಳಿ ಉರ್ವ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕುದ್ರೋಳಿಯ ಸಿ.ಪಿ.ಸಿ ಕಂಪೌಂಡ್ ನಿವಾಸಿ ಇಬ್ರಾಹೀಂ.ಕೆ (37) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.

ಆರೋಪಿ ಇಬ್ರಾಹೀಂ  ನಗರದ ಕುಂಟಿಕಾನ ಫ್ಲೈ ಓವರ್ ಕೆಳಗೆ ಗಾಂಜಾ ಮಾರಾಟ ಮಾಡುತ್ತಿದ್ದ  ವೇಳೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಆತನನ್ನು ಬಂಧಿಸಿ 50 ಗ್ರಾಂ. ಗಾಂಜಾ, ಎರಡು ಮೊಬೈಲ್ ಪೋನ್, ಸ್ಕೂಟರ್, ಮತ್ತು 150 ರೂ ನಗದನ್ನು ವಶಪಡಿಸಿಕೊಂಡಿದ್ದಾರೆ.

ಈ ಬಗ್ಗೆ ಉರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

By suddi9

Leave a Reply

Your email address will not be published. Required fields are marked *