ಬಂಟ್ವಾಳ: ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಅಧ್ಯಕ್ಷರಾದ ಸನ್ಮಾನ್ಯ ಅಮಿತ್ ಶಾ ರವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸದ ಸಂಧರ್ಭದಲ್ಲಿ ಬಂಟ್ವಾಳದಲ್ಲಿ ನಡೆಯುವ ಬೆಳ್ತಂಗಡಿ, ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನವಶಕ್ತಿ ಸಮಾವೇಶದ ಪೂರ್ವಭಾವಿ ಸಭೆಯು ಗುರುವಾರ ಬಂಟ್ವಾಳ ಕ್ಷೇತ್ರದ ಬಿ.ಸಿ.ರೋಡಿನ ಪಕ್ಷದ ಕಛೇರಿಯಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಸನ್ಮಾನ್ಯ ಸಂಜೀವ ಮಠಂದೂರು ಅವರ ಅಧ್ಯಕ್ಷತೆಯಲ್ಲಿ ಜರಗಿತು.
ಸಂಸದ ನಳಿನ್ ಕುಮಾರ್ ಕಟೀಲ್ ನವಶಕ್ತಿ ಸಮಾವೇಶದ ಪೂರ್ವ ಸಿದ್ದತೆಯ ಮಾಹಿತಿ ಹಾಗೂ ವ್ಯವಸ್ಥೆಗಳ ಬಗ್ಗೆ ತಿಳಿಸಿದರು. ಜಿಲ್ಲಾ ಚುನಾವಣಾ ಸಂಚಾಲಕರಾದ ಕೆ.ಮೋನಪ್ಪ ಭಂಡಾರಿ, ವಿಭಾಗ ಸಂಘಟನ ಕಾರ್ಯದರ್ಶಿ ಪ್ರಸಾದ್ ಕುಮಾರ್, ಜಿಲ್ಲಾ ಪ್ರಧಾನಕಾರ್ಯದರ್ಶಿ ಸುದರ್ಶನ್ ಮೂಡಬಿದ್ರೆ, ರಾಜ್ಯ ಬಿಜೆಪಿ ಸಹವಕ್ತಾರೆ ಶ್ರೀಮತಿ ಸುಲೋಚನ ಜಿ.ಕೆ.ಭಟ್, ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿ, ಜಿಲ್ಲಾ ಉಪಾಧ್ಯಕ್ಷ ಜಿ.ಆನಂದ, ಜಿಲ್ಲಾ ವಕ್ತಾರರಾದ ಹರಿಕೃಷ್ಣ ಬಂಟ್ವಾಳ, ವಿಕಾಸ್ ಪುತ್ತೂರು, ಜಿತೇಂದ್ರ ಕೊಟ್ಟಾರಿ, ರಾಜೇಶ ನಾೈಕ್ ಉಳಿಪ್ಪಾಡಿ, ಕ್ಷೇತ್ರ ಅಧ್ಯಕ್ಷ ಬಿ.ದೇವದಾಸ್ ಶೆಟ್ಟಿ, ಸಾಮಾಜಿಕ ಜಾಲತಾಣದ ಜಿಲ್ಲಾ ಸಂಚಾಲಕ ಸುರಜ್ ಜೈನ್, ಕ್ಷೇತ್ರ ಪ್ರಧಾನಕಾರ್ಯದರ್ಶಿಗಳಾದ ರಾಮದಾಸ್ ಬಂಟ್ವಾಳ, ಮೋನಪ್ಪ ದೇವಸ್ಯ, ಜಿಲ್ಲಾ ಕಾರ್ಯದರ್ಶಿ ಸುಗುಣ ಕಿಣಿ ಮತ್ತಿತರ ಪ್ರಮುಖರು ಈ ಸಂಧರ್ಭದಲಿ ಉಪಸ್ಥಿತರಿದ್ದರು.