ಬೆಂಗಳೂರು : ರಾಜ್ಯ ಸರ್ಕಾರವು ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಿದ್ದು, ಪದವಿಪೂರ್ವ, ಬಜೆಟ್ ನಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶ ಕೋರುವ ಎಲ್ಲಾ ವಿದ್ಯಾರ್ಥಿನಿಯರಿಗೆ ಪೂರ್ಣ ಶುಲ್ಕ ವಿನಾಯ್ತಿ ನೀಡಲು ನಿರ್ಧರಿಸಿದೆ.
ಹೌದು ಸರ್ಕಾರಿ ಕಾಲೇಜುಗಳಲ್ಲಿ ಇನ್ಮುಂದೆ ಉನ್ನತ ಶಿಕ್ಷಣ ಪಡೆಯುವ ವಿದ್ಯಾರ್ಥನಿಯರು ಪದವಿಪೂರ್ವ, ಪದವಿ, ಸ್ನಾತಕೋತ್ತರ ಪದವಿಗಳಿಗೆ ಪೂರ್ಣ ಶುಲ್ಕ ವಿನಾಯ್ತಿ ನೀಡಲು 95 ಕೋಟಿ ಅನುದಾವನ್ನು ಸರ್ಕಾರ ಮೀಸಲಿಟ್ಟಿದೆ.
ಇನ್ನು ಉನ್ನತ ಶಿಕ್ಷಣವನ್ನು ಉತ್ತಮಗೊಳಿಸಲು ಚಿಕ್ಕಮಗಳೂರಿನಲ್ಲಿ ಕುವೆಂಪು ವಿವಿಯ ಸ್ನಾತಕೋತ್ತರ ಕೇಂದ್ರ, ಬಾಗಲಕೋಟೆಯ ಜಮಖಂಡಿಯಲ್ಲಿ ರಾಣಿ ಚೆನ್ನಮ್ಮ ವಿವಿಯ ಸ್ನಾತಕೊತ್ತರ ಕೇಂದ್ರ ಸ್ಥಾಪಿಸಲು ತಲಾ ಒಂದು ಕೋಟಿ ರೂ. ಅನುದಾನ ಘೋಷಿಸಲಾಗಿದೆ.
ಧಾರವಾಡದ ಕರ್ನಾಟಕ ವಿವಿಯಲ್ಲಿ ಕೊಂಕಣಿ ಅಧ್ಯಯನ ಪೀಠ ಸ್ಥಾಪನೆಗೆ ಒಂದು ಕೋಟಿ ಅನುದಾನವನ್ನು ಮೀಸಲಿಟ್ಟಿದ್ದು, ಉನ್ನತ ಶಿಕ್ಷಣ ಇಲಾಖೆಗೆ 4514 ಕೋಟಿ ರೂ. ಅನುದಾನವನ್ನು ಮೀಸಲಿಟ್ಟಿದ್ದಾರೆ.
