Moral-policing

ಮಂಗಳೂರು: ಬಸ್ಸಿನಲ್ಲಿದ್ದ ವಿದ್ಯಾರ್ಥಿಗಳಿಗೆ ಮೇಲೆ ದುಷ್ಕರ್ಮಿಗಳ ತಂಡವೊಂದು ಹಲ್ಲೆ ನಡೆಸಿದ ಘಟನೆ ತಲಪಾಡಿ ಜಂಕ್ಷನ್ ನಲ್ಲಿ ನಡೆದಿದೆ.

ಗಾಯಾಳು ವಿದ್ಯಾರ್ಥಿಗಳನ್ನು ಕುಂಜತ್ತೂರು ನಿವಾಸಿಗಳಾದ ಇಮ್ರಾನ್ ಹಾಗೂ ಫಯಾಝ್ ಎಂದು ಗುರುತಿಸಲಾಗಿದೆ.

ಇಮ್ರಾನ್ ಹಾಗೂ ಫಯಾಝ್ ಮಂಗಳೂರಿನಿಂದ ತಲಪಾಡಿಗೆ ಬಸ್ ನಲ್ಲಿ ಈ ತೆರಳುತ್ತಿದ್ದ ವೇಳೆ ಕೇರಳದ ಹೊಸಂಗಡಿ ಮೂಲದ ತಂಡ ಎನ್ನಲಾದ ದುಷ್ಕರ್ಮಿಗಳ ತಂಡ ವಿನಾ ಕಾರಣಕ್ಕೆ ಹಲ್ಲೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಘಟನೆಯಲ್ಲಿ ಗಾಯಗೊಂಡ ವಿದ್ಯಾರ್ಥಿಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಉಳಿದ ಮೂವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಎನ್ನಲಾಗಿದೆ.

ವಿದ್ಯಾರ್ಥಿನಿಯೊಬ್ಬಳ ವಿಚಾರಕ್ಕೆ ಸಂಬಂಧಪಟ್ಟಂತೆ ತಿಂಗಳ ಹಿಂದೆಯೂ ಗಲಾಟೆ ನಡೆದಿತ್ತು ಎಂದು ತಿಳಿದು ಬಂದಿದೆ.

ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

By suddi9

Leave a Reply

Your email address will not be published. Required fields are marked *