ಕಡಬ: ಕಾರಿಗೊಂದು ಟಿಪ್ಪರ್ ಢಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಗಂಭೀರ ಗಾಯಗೊಂಡ ಘಟನೆ ಇಲ್ಲಿನ ಗೋಳಿತೊಟ್ಟು ಎಂಬಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ.
ಸ್ಥಳೀಯ ನಿವಾಸಿ ಅಣ್ಣಿ ಗೌಡ ಎಂಬವರ ಪುತ್ರ ಯಶೋಧರ ಗೌಡ ಗಾಯಗೊಂಡ ಕಾರು ಚಾಲಕ ಎಂದು ಗುರುತಿಸಲಾಗಿದೆ.
ಉಪ್ಪಿನಂಗಡಿಯಿಂದ ನೆಲ್ಯಾಡಿ ಕಡೆಗೆ ತೆರಳುತ್ತಿದ್ದ ಮರಳು ಸಾಗಾಟದ ಟಿಪ್ಪರ್ ಎದುರಿನಿಂದ ಬರುತ್ತಿದ್ದ ಕಾರಿಗೆ ಮುಖಾಮುಖಿ ಢಿಕ್ಕಿಯಾಗಿ ಈ ಅಪಘಾತ ನಡೆದಿದ್ದು, ಪರಿಣಾಮ ಯಶೋಧರ ಗಂಭೀರ ಗಾಯಗೊಂಡಿದ್ದಾರೆ. ಬಳಿಕ ಅವರನ್ನು ಸ್ಥಳೀಯರು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಈ ಬಗ್ಗೆ ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
