ಬಳ್ಳಾರಿ: ವ್ಯಕ್ತಿಯೋರ್ವ ನೀರಿನಲ್ಲಿ ಮುಳುಗಿ ನೀರುಪಾಲಾಗಿರುವ ದಾರುಣ ಘಟನೆ ಜಿಲ್ಲೆಯ ಸಿರುಗುಪ್ಪ ಬಳಿಯ ತುಂಗಾ ಭದ್ರ ನದಿಯಲ್ಲಿ ಮಂಗಳವಾರ ನಡೆದಿದೆ.
ಶ್ರೀನಿವಾಸ್ (38) ನೀರುಪಾಲಾಗಿರುವ ವ್ಯಕ್ತಿ ದು ಗುರುತಿಸಲಾಗಿದೆ.
ಶ್ರೀನಿವಾಸ್ ಅವರು ನದಿಗೆ ಈಜಲು ತೆರಳಿದ್ದು, ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದಾರೆ ಎನ್ನಲಾಗಿದೆ.
ಇನ್ನು ಸಿರುಗುಪ್ಪ ಸಿಪಿಐ ಚಂದನ್ ಗೋಪಾಲ್ ನೇತೃತ್ವದ ತಂಡ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದು, ಅಗ್ನಿಶಾಮಕ ದಳ ಮತ್ತು ಸ್ಥಳೀಯ ಮೀನುಗಾರರಿಂದ ಶ್ರೀನಿವಾಸ ದೇಹಕ್ಕಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ.
