ಕೋಲಾರ: ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೊಗುವ ಕಾರಿಗೆ ಖಾಸಗಿ ಬಸ್​ವೊಂದು ಢಿಕ್ಕಿ ಹೊಡೆದು ಕಾರಿನಲ್ಲಿದ್ದ ಕೇರಳ ಮೂಲದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶನಿವಾರ ರಾತ್ರಿ ನಡೆದಿದೆ.

ಲಾರಿಯೊಂದನ್ನು ಓವರ್​ ಟೇಕ್​ ಮಾಡುವ ಭರದಲ್ಲಿ ಬಸ್ ಕಾರಿಗೆ ಡಿಕ್ಕಿ ಹೊಡೆದಿದೆ, ಕೋಲಾರದ ಗಡಿ, ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಬಂಗಾರುಪಾಳ್ಯಂ ಬಳಿ ಈ ಘಟನೆ ನಡೆದಿದ್ದು ಇವರು ಕಾಸರಗೋಡಿನಿಂದ  ತಿರುಪತಿಗೆ ಹೋಗುತ್ತಿದ್ದರು ಎನ್ನಲಾಗಿದೆ.

ಗಾಯಾಳುಗಳಿಗೆ ಬಂಗಾರುಪಾಳ್ಯಂ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

By suddi9

Leave a Reply

Your email address will not be published. Required fields are marked *