ಬಂಟ್ವಾಳ:ವಾಮದಪದವು-ಮೂರ್ಜೆ ರಸ್ತೆ ನಡುವಿನ ತಾಲ್ಲೂಕಿನ ಇರ್ವತ್ತೂರು ಬಸ್‍ನಿಲ್ದಾಣದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಪುಂಜಾಲಕಟ್ಟೆ ಠಾಣೆ ಪೊಲೀಸರು ಮಂಗಳವಾರ ಬಂಧಿಸಿದ ಘಟನೆ ನಡೆದಿದೆ.

ಆರೋಪಿಯನ್ನು ಸ್ಥಳೀಯ ನಿವಾಸಿ ಮಹಾಬಲ ಶೆಟ್ಟಿ ಎಂಬವರ ಪುತ್ರ ಬಾಲಕೃಷ್ಣ ಶೆಟ್ಟಿ ಎಂದು ಗುರುತಿಸಲಾಗಿದೆ. ಈತನನ್ನು ಮಂಗಳವಾರ ಸಂಜೆ ಮದ್ಯ ಮಾರಾಟ ಮಾಡುತ್ತಿದ್ದ ವೇಳೆ 750 ಮಿ.ಲೀ.ನ ಮೂರು ಮದ್ಯದ ಬಾಟಲು ಸಹಿತ ವಶಕ್ಕೆ ತೆಗೆದುಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

By suddi9

Leave a Reply

Your email address will not be published. Required fields are marked *