ARREST-755x437

ಮಂಗಳೂರು: ನಗರದಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಭೂಗತ ಪಾತಕಿ ಕಲಿಯೋಗೀಶನ ಸಹಚರನನ್ನು ಬಂಧಿಸುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಕೇರಳ ಕಾಸರಗೋಡು ಜಿಲ್ಲೆಯ ಮೊಹಮ್ಮದ್ ಹನೀಫ್ ಯಾನೆ ಮೊಹಮ್ಮದ್ ಆಲಿ ಯಾನೆ ಮುನ್ನಾ (35) ಬಂಧಿತ ಆರೋಪಿ ಎಮದು ಗುರುತಿಸಲಾಗಿದೆ.

2017ರ ಡಿ.8ರಂದು ರಾತ್ರಿ ನಗರದ ಕಾರ್ ಸ್ಟ್ರೀಟ್ ನಲ್ಲಿರುವ ಬಟ್ಟೆ ಮಳಿಗೆಯೊಂದರ ಮಾಲಿಕ ಮಹಾಲಿಂಗ ನಾಯ್ಕ ಅವರಿಗೆ ಗುಂಡು ಹಾರಿಸಿ ಪರಾರಿಯಾಗಿದ್ದರು. ಈ ಪ್ರಕರಣವನ್ನು ಭೇದಿಸಿದ ಪೊಲೀಸರು ಭೂಗತ ಪಾತಕಿ ಕಲಿಯೋಗೀಶನ ಸಹಚರ ಮೊಹಮ್ಮದ್ ಹನೀಫ್ ನನ್ನು ಬಂಧಿಸಿದ್ದಾರೆ.

ಮುಹಮ್ಮದ್ ಹನೀಫ್ ಯಾನೆ ಮುಹಮ್ಮದ್ ಆಲಿ ಯಾನೆ ಮುನ್ನಾ ಈ ಹಿಂದೆ ಕಲಿ ಯೋಗೀಶನ ಜತೆ ನೇರ ಸಂಪರ್ಕದಲ್ಲಿದ್ದ. ಈತನ ವಿರುದ್ಧ ಮಂಗಳೂರು ನಗರ, ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣ, ಕೊಲೆ ಬೆದರಿಕೆ ಪ್ರಕರಣ, ಕುಂಬಳೆ ಪೊಲೀಸ್ ಠಾಣೆಯಲ್ಲಿ ಹಫ್ತಾ ಹಣಕ್ಕಾಗಿ ಕೊಲೆ ಯತ್ನ ಪ್ರಕರಣ, ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ, ಕೊಣಾಜೆ ಪೊಲೀಸ್ ಠಾಣೆಯಲ್ಲಿ ದರೋಡೆಗೆ ಸಂಚು ರೂಫಿಸಿದ ಪ್ರಕರಣ, ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಗುಂಡು ಹಾರಿಸಿ ಕೊಲೆಗೆ ಯತ್ನಿಸಿದ ಪ್ರಕರಣ, ವಿಟ್ಲ ಪೊಲೀಸ್ ಠಾಣೆಯಲ್ಲಿ ಅಕ್ರಮವಾಗಿ ಶಸ್ತ್ರಾಸ್ತ್ರ ಹೊಂದಿದ ಪ್ರಕರಣ, ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಬೆದರಿಕೆ ಹಾಗೂ ಕೊಲೆ ಯತ್ನಕ್ಕೆ ಸಂಬಂಧಿಸಿದ ಪ್ರಕರಣ, ಬರ್ಕೆ ಪೊಲೀಸ್ ಠಾಣೆಯಲ್ಲಿ 2 ಪ್ರಕರಣ ಸೇರಿದಂತೆ ಒಟ್ಟು ಹತ್ತು ಪ್ರಕರಣಗಳು ದಾಖಲಾಗಿವೆ.

By suddi9

Leave a Reply

Your email address will not be published. Required fields are marked *