ಅಡ್ಡೂರು: ಸುನ್ನೀ ಯುವಜನ ಸಂಘ ಅಡ್ಡೂರು ಘಟಕ ವತಿಯಿಂದ ಮಾ.23ರಂದು “ಮಹ್ಳರತುಲ್ ಬದ್ರಿಯಃ ಹಾಗೂ ಬೃಹತ್ ಬುರ್ದಾ ಮಜ್ಲಿಸ್” ಕಾರ್ಯಕ್ರಮ ಇಲ್ಲಿನ ಬದ್ರಿಯಾ ಜುಮಾ ಮಸೀದಿ ವಠಾರದಲ್ಲಿ ಆಯೋಜಿಸಲಾಗಿದೆ.
ಅಂದು ರಾತ್ರಿ 7ಕ್ಕೆ ನಡೆಯಲಿರುವ ಕಾರ್ಯಕ್ರಮವನ್ನು ಅಡ್ಡೂರು ಬದ್ರಿಯಾ ಜುಮಾ ಮಸೀದಿ ಖತೀಬ್ ಮುಹಮ್ಮದ್ ಶರೀಫ್ ದಾರಿಮಿ ಉದ್ಘಾಟಿಸಲಿದ್ದು, ಅಸ್ಸಯ್ಯಿದ್ ನಿಝಾಮುದ್ದೀನ್ ಬಾಫಕಿ ತಂಙಳ್ ಸಖಾಫೀ ಮಲ್ಲೂರು ಅಧ್ಯಕ್ಷತೆ ವಹಿಸಲಿದ್ದಾರೆ. ಅಸ್ಸಯ್ಯಿದ್ ಅಬ್ದುರ್ರಹ್ಮಾನ್ ಇಂಬಿಚ್ಚಿಕೋಯ ತಂಙಳ್ ಬಾಯಾರ್ ದುಆಶೀರ್ವಚನ ನೀಡಲಿದ್ದು, ಬುರ್ದಾ ಆಲಾಪನೆಯ ನೇತೃತ್ವವನ್ನು ಮೌಲಾನ ನಿಝಾರ್ ಖುತುಬಿ ಮಡವೂರು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಚಿವ ಯು.ಟಿ.ಖಾದರ್, ಶಾಸಕ ಬಿ.ಎ.ಮೊಯಿದ್ದೀನ್ ಬಾವಾ, ದ.ಕ.ಜಿಲ್ಲಾ ವಕ್ಫ್ ಸಮಿತಿ ಅಧ್ಯಕ್ಷ ಹಾಜಿ ಯು.ಕೆ. ಮೋನು ಕಣಚೂರು, ಉಪಾಧ್ಯಕ್ಷ ಹಾಜಿ ಶಾಹುಲ್ ಹಮೀದ್ ಮೆಟ್ರೊ ಹಾಗೂ ಜಿ.ಪಂ.ಸದಸ್ಯ ಯು.ಪಿ.ಇಬ್ರಾಹೀಂ ಮತ್ತಿತರರು ಭಾಗವಹಿಸಲಿದ್ದಾರೆ.
ಈ ವೇಳೆ ಉಮರುಲ್ ಫಾರೂಖ್ ಸಖಾಫಿ ಕೃಷ್ಣಾಪುರ ಮುಖ್ಯ ಪ್ರಭಾಷಣ ಗೈಯಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
