ಶಿವಮೊಗ್ಗ: ಮಾ.26ರಂದು ಕರ್ನಾಟಕಕ್ಕೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಭೇಟಿ ನೀಡಲಿದ್ದಾರೆ ಎಂದು ಬಿಜೆಪಿ ಶಿವಮೊಗ್ಗ ಜಿಲ್ಲಾಧ್ಯಕ್ಷ ರುದ್ರೇಗೌಡ ಹೇಳಿದ್ದಾರೆ.
ಮಾ.26ರಂದು ಶಾ ಶಿವಮೊಗ್ಗ ಜಿಲ್ಲೆಯ ಕುಪ್ಪಳ್ಳಿಯಲ್ಲಿರುವ ಕವಿಶೈಲಕ್ಕೆ ಅಮಿತ್ ಶಾ ಭೇಟಿ ನೀಡಲಿದ್ದು, ಬಳಿಕ ಬಾಳೇಬೈಲಿನಲ್ಲಿರುವ ನಂದಿತಾ ಅವರ ಮನೆಗೆ ಅಮಿತ ಶಾ ತೆರೆಳಲಿದ್ದಾರೆ. ಅಲ್ಲದೆ, ತೀರ್ಥಹಳ್ಳಿಯಲ್ಲಿ ನಡೆಯಲಿರುವ ಅಡಿಕೆ ಬೆಳಗಾರರ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ ಎಂದು ಹೇಳಿದರು.
ಅಮಿತ್ ಶಾ ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಶಿವಮೊಗ್ಗ ನಗರದಲ್ಲಿ ರೋಡ್ ಶೋ ನಡೆಯಲಿದೆ. ರೋಡ್ ಶೋ ನಲ್ಲಿ 25 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆಯಿದೆ ಎಂದು ರುದ್ರೇಗೌಡ ತಿಳಿಸಿದರು.
