ಮಂಗಳೂರು: ಬಂಟರ ಯಾನೆ ನಾಡವರ ಮಾತೃ ಸಂಘದ ಮಹಿಳಾ ವಿಭಾಗ ‘ಶಕ್ತಿ’ ವತಿಯಿಂದ ದೇಶಿ ಉತ್ಥಾನ ಸಾವಯವ ರೈತ ಬಂಧು ಟ್ರಸ್ಟ್‌, ಆರೋಗ್ಯ ಭಾರತಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದಿಂದ ಮೇ.1ರಂದು ಮಧ್ಯಾಹ್ನ 2ಕ್ಕೆ ‘ಪಗ್ಗು ಪದಿನೆನ್ಮ-ಸಿರಿದಿನ ಮತ್ತು ಸಿರಿಧಾನ್ಯ ಮೇಳ’ವನ್ನು ನಗರದ ಬಂಟ್ಸ್‌ ಹಾಸ್ಟೆಲ್‌ ನಲ್ಲಿ ಆಯೋಜಿಸಲಾಗಿದೆ.

ಅಂದು ನಡೆಯಲಿರುವ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಏಳು ಮಹಿಳೆಯರಿಗೆ ‘ಏಳ್ವೆರ್‌ ಸಿರಿ ಪ್ರಶಸ್ತಿ’ ನೀಡಿ ಗೌರವಿಸಲಾಗುವುದು, ಸಿರಿಯ ಕುರಿತು ಹೆಚ್ಚಿನ ಅರಿವು ಮೂಡಿಸುವ ದೃಷ್ಟಿಯಿಂದ ಮಕ್ಕಳಿಗೆ ಮತ್ತು ಸಾರ್ವಜನಿಕರಿಗೆ ರಸಪ್ರಶ್ನೆ ಸ್ಪರ್ಧೆ, ಸಿರಿ-2018 ಎಂಬ ಸಿರಿ ವೇಷ ಸ್ಪರ್ಧೆ ನಡೆಯಲಿದೆ ಎಂದು ಬಂಟರ ಯಾನೆ ನಾಡವರ ಮಾತೃ ಸಂಘದ ಮಹಿಳಾ ವಿಭಾಗ ಅಧ್ಯಕ್ಷೆ ಡಾ.ಆಶಾಜ್ಯೋತಿ ರೈ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

By suddi9

Leave a Reply

Your email address will not be published. Required fields are marked *