NALPAD

ಬೆಂಗಳೂರು: ಹಲ್ಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಶಾಸಕ ಎನ್. ಎ. ಹ್ಯಾರಿಸ್ ಪುತ್ರ ಮೊಹಮದ್ ನಲಪಾಡ್ ಹಾಗೂ ಆತನ ಸಹಚರರ ನ್ಯಾಯಾಂಗ ಬಂಧನದ ಅವಧಿಯನ್ನು 1ನೇ ಎಸಿಎಂಎಂ ಕೋರ್ಟ್ ಮತ್ತೆ 14 ದಿನಗಳ ಕಾಲ ವಿಸ್ತರಿಸಿದೆ.

ವಿದ್ವತ್ ಲೋಗನಾಥನ್ ಎಂಬವರ ಮೇಲೆ ಫೆಬ್ರವರಿ 17ರಂದು ನಗರದ ಯುಬಿ ಸಿಟಿಯ ಫರ್ಜಿ ಕೆಫೆಯಲ್ಲಿ ಹಲ್ಲೆ ನಡೆಸಲಾಗಿತ್ತು. ವಿದ್ವತ್ ಅವರು ಗಂಭೀರವಾಗಿ ಗಾಯಗೊಂಡು ಹಲವಾರು ದಿನಗಳ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು.

ವೀಡಿಯೊ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿದ ನ್ಯಾಯಾಲಯವು ಎಪ್ರಿಲ್ 18ರ ತನಕ ನ್ಯಾಯಾಂಗ ಬಂಧನ ವಿಸ್ತರಿಸಿ ಆದೇಶ ಹೊರಡಿಸಿದೆ. ನಲಪಾಡ್ ಸಲ್ಲಿಸಿರುವ ಜಾಮೀನು ಅರ್ಜಿ ಕೂಡ ವಜಾಗೊಂಡಿದೆ.

By suddi9

Leave a Reply

Your email address will not be published. Required fields are marked *