ಉಳ್ಳಾಲ: ಗ್ಯಾರೇಜಲ್ಲಿ ಆಕಸ್ಮಿಕವಾಗಿ ಗ್ಯಾಸ್ ವೆಲ್ಡಿಂಗ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ಇಲ್ಲಿನ ಚೆಂಬುಗುಡ್ಡೆ ಮಸೀದಿ ಬಳಿ ಶುಕ್ರವಾರ ನಡೆದಿದೆ.
ಕಾರ್ಮಿಕರಾದ ಲತೀಶ್ (55) ಹಾಗೂ ನವೀನ್ ಆಚಾರಿ (30) ಗಂಭೀರ ಗಾಯಗೊಂಡವರೆಂದು ಗುರುತಿಸಲಾಗಿದೆ.
ಘಟನೆಯಲ್ಲಿ ಅರ್ಫಾಣ್ (22) ಎಂಬಾತನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಮೂವರನ್ನೂ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.