ಬೆಂಗಳೂರು: ಮೇ 12ರಂದು ರಾಜ್ಯ ವಿಧಾನಸಭೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಮೇ 11 ಮತ್ತು 12ರಂದು ರಾಜ್ಯದ ಎಲ್ಲಾ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಚುನಾವಣೆ ಪ್ರಕ್ರಿಯೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಉಪನ್ಯಾಸಕರು ಪಾಲ್ಗೊಳ್ಳುವುದರಿಂದ ಹಾಗೂ ಪದವಿ ಪೂರ್ವ ಕಾಲೇಜುಗಳನ್ನು ಮತಗಟ್ಟೆಗಳಾಗಿ ಬಳಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಮೇ 11 ಮತ್ತು 12ರಂದು ರಾಜ್ಯದ ಎಲ್ಲಾ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ರಾಜ್ಯ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.