ಬಂಟ್ವಾಳ: ಕ್ಷುಲ್ಲಕ ಕಾರಣಕ್ಕಾಗಿ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದ ಪರಿಣಾಮ ಓರ್ವ ಗಾಯಗೊಂಡು ಘಟನೆ ತಾಲೂಕಿನ ನಂದಾವರ ದೇವಸ್ಥಾನದ ಸಮೀಪ ಬುಧವಾರ ರಾತ್ರಿ ನಡೆದಿದೆ.
ನಿನ್ನೆ ರಾತ್ರಿ ನಂದಾವರದಲ್ಲಿ ಬಿಜೆಪಿ ಕಾರ್ಯಕರ್ತರೊಬ್ಬರ ಮನೆಯಲ್ಲಿ ಪಕ್ಷದ ಸಭೆ ನಡೆದಿದ್ದು, ಈ ಸಭೆಗೆ ಇಲ್ಲಿನ ಬಿಜೆಪಿಯ ಕಾರ್ಯಕರ್ತರು ತೆರಳಿದ್ದರು. ಸಭೆ ಮುಗಿದ ಬಳಿಕ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಕಾರ್ಯಕರ್ತರಿಗೆ ಧಿಕ್ಕಾರ ಕೂಗಿದ್ದು, ಇದರಿಂದ ಇತ್ತಂಡಗಳ ನಡುವೆ ಮಾತಿನ ಚಕಮಕಿ ನಡೆದು ಮಾರಾಮಾರಿ ನಡೆದಿದೆ ಎಂದು ತಿಳಿದು ಬಂದಿದೆ.
ಇದರಿಂದ ಓರ್ವನಿಗೆ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಬಂಟ್ವಾಳ ಠಾಣೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ, ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸಿದ್ದಾರೆ.
