4be6758bd6d0c00d4acedc12906bbda6

ಕರ್ನಾಟಕ ವಿಧಾನಸಭೆಯ 222 ಸ್ಥಾನಗಳಲ್ಲಿ 165 ಸ್ಥಾನಗಳ ಪೈಕಿ ಕಾಂಗ್ರೆಸ್ 89 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದರೆ ಬಿಜೆಪಿ 93 ಸ್ಥಾನಗಳಲ್ಲಿ ಮತ್ತು ಜೆಡಿಎಸ್ 26 ಸ್ಥಾನಗಳ ಮುನ್ನಡೆ ಸಾಧಿಸಿದೆ.

ಇತರರಲ್ಲಿ ಒಬ್ಬ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿ ಬಿ.ಎಸ್. ಯಡಿಯೂರಪ್ಪ ಅವರು ಶಿಕಾರಿಪುರ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದರೆ, ಕಾಂಗ್ರೆಸ್ ಅಭ್ಯರ್ಥಿ ಸಿದ್ದರಾಮಯ್ಯ ಬಾದಾಮಿ ಹಾಗೂ ಚಾಮುಂಡೇಶ್ವರಿ ಎರಡೂ ಕ್ಷೇತ್ರಗಳಲ್ಲಿ ಹಿನ್ನೆಡೆ ಸಾಧಿಸಿದ್ದಾರೆ. ಸಿದ್ದರಾಮಯ್ಯ ಪುತ್ರ ಯತಿಂದ್ರ ಮೈಸೂರಿನ ವರುಣಾ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆಯಾ ಮತ ಎಣಿಕೆ ಆರಂಭವಾಗಿದ್ದು, ಜನಾದೇಶ ಪಡೆಯುವ ಕಾಲ ಸನ್ನಿಹಿತವಾಗಿದೆ. ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ ಪೈಕಿ 222 ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, ಮೇ 12ರಂದು ಮತದಾನ ನಡೆದಿತ್ತು.

ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಅಲ್ಲದೆ ಸರಿ ಸುಮಾರು 28ಕ್ಕೂ ಅಧಿಕ ಪ್ರಮುಖ ಪಕ್ಷಗಳ ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ. ಚುನಾವಣೆಯಲ್ಲಿ 2,622 ಅಭ್ಯರ್ಥಿಗಳು ಸ್ಪರ್ಧಿಸಿದ್ದು, ಅವರಲ್ಲಿ 2,405 ಪುರುಷ ಅಭ್ಯರ್ಥಿಗಳು, 217 ಮಹಿಳಾ ಅಭ್ಯರ್ಥಿಗಳಿದ್ದಾರೆ.

By suddi9

Leave a Reply

Your email address will not be published. Required fields are marked *