ಬೆಂಗಳೂರು: ಮತ್ತೊಮ್ಮೆ ನೂತನ ಸರ್ಕಾರದ ಪದಗ್ರಹಣ ಸಮಾರಂಭವನ್ನು ವಿಜೃಂಭಣೆಯಿಂದ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಿ.ಎಸ್. ಯಡಿಯೂರಪ್ಪ ಅವರು ವಿಧಾನಸೌಧದಲ್ಲಿ ಮೊದಲ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಿಶ್ವಾಸಮತ ವಿಷಯ ಸುಪ್ರೀಂಕೋರ್ಟ್ ನಲ್ಲಿದೆ. ಸಾದ ಬಳಿಕ ವಿಧಾನಸಭೆಯಲ್ಲಿ ವಿಶ್ವಾಸ ಮತಯಾಚನೆಯಲ್ಲಿ ಯಶಸ್ವಿಯಾದ ಬಳಿಕ ಸಂಪುಟ ವಿಸ್ತರಣೆ ಮಾಡಿ, ಲಕ್ಷಾಂತರ ಜನರನ್ನು ಸೇರಿಸಿ, ಸಮಾರಂಭ ನಡೆಸುತ್ತೇವೆ ಎಂದರು.
ಆ ಸಮಾರಂಭಕ್ಕೆ ಪ್ರಧಾನಿ ಮೋದಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸೇರಿದಂತೆ ಇತರೆ ರಾಜ್ಯಗಳ ಮುಖ್ಯಮಂತ್ರಿಗಳನ್ನು ಆಮಂತ್ರಿಸಿ, ಮತ್ತೊಮ್ಮೆ ದೊಡ್ಡ ಪ್ರಮಾಣದಲ್ಲಿ ಅಧಿಕಾರ ಸ್ವೀಕಾರ ಸಮಾರಂಭ ಮಾಡುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
