ಬೆಂಗಳೂರು: ಸುಪ್ರೀಂಕೋರ್ಟ್ ತೀರ್ಪಿನಂತೆ 15ನೇ ವಿಧಾನಸಭೆ ಚೊಚ್ಚಲ ವಿಧಾನಸಭೆಯಲ್ಲಿ ಶನಿವಾರ 4ಗಂಟೆಗೆ ಹಂಗಾಮಿ ಸ್ಪೀಕರ್ ಕೆಜಿ ಬೋಪಯ್ಯ ಅವರ ನೇತೃತ್ವದಲ್ಲಿ ನಡೆದ ವಿಶ್ವಾಸಮತ ಯಾಚನೆಯಲ್ಲಿ
ಹಂಗಾಮಿ ಸ್ಪೀಕರ್ ಕೆಜಿ ಬೋಪಯ್ಯ ಅವರ ಸೂಚನೆ ಮೇರೆಗೆ ಬಿಎಸ್ ಯಡಿಯೂರಪ್ಪ ವಿಶ್ವಾಸಮತ ಪ್ರಸ್ತಾವನೆ ಮಂಡಿಸಿದರು.ಬಳಿಕ ಭಾಷಣ ಆರಂಭಿಸಿ, ಹೋರಾಟ ಜೀನವದ ಹಾದಿಯನ್ನು ಮೆಲುಕು ಹಾಕಿದರು.
ವಿಶ್ವಾಸಮತ ಯಾಚನೆಗೂ ಮುನ್ನ ರಾಜೀನಾಮೆ: ಭಾವನಾತ್ಮಕ ಭಾಷಣ ಮಾಡಿದ ಬಿಎಸ್ ಯಡಿಯೂರಪ್ಪ ಕೊನೆಯಲ್ಲಿ ನಾನು ವಿಶ್ವಾಸಮತ ಪ್ರಸ್ತಾಪ ಮಂಡಿಸದೇ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಹೇಳಿ ಗದ್ಗದಿತರಾದರು. ಜನತಾ ಜನಾರ್ದನರ ಮುಂದೆ ಹೋಗಿ ನ್ಯಾಯ ಕೇಳುತ್ತೇನೆ. ರಾಜಭವನಕ್ಕೆ ತೆರಳಿ ರಾಜೀನಾಮೆ ಸಲ್ಲಿಸುವುದಾಗಿ ಹೇಳಿ ವಿಧಾನಸಭೆ ಕಲಾಪದಿಂದ ನಿರ್ಗಮಿಸಿದರು.
