3d76bb61b130deeb2cbc1581ec63f9d6

ಬಂಟ್ವಾಳ: ರಾಜ್ಯದಲ್ಲಿ  ನೂತನ ಸಮ್ಮಿಶ್ರ ಸರಕಾರ ರಚನೆ ಹಿನ್ನೆಲೆ ನಡೆದ ಸಂಭ್ರಮಾಚರಣೆಯಲ್ಲಿ  ಕಾಂಗ್ರೆಸ್ -ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದು  ನಾಲ್ವರು ಗಾಯಗೊಂಡ ಘಟನೆ ವಿಟ್ಲದ  ಕೆಲಿಂಜ ಬಲ್ಲಿ ಶನಿವಾರ ರಾತ್ರಿ ನಡೆದಿದೆ.

ಗಾಯಾಳುಗಳನ್ನು ಕಾಂಗ್ರೆಸ್ ಕಾರ್ಯಕರ್ತರಾದ ಅಝೀಝ್ , ಸಾಲೀಮ್  ಎಂದು ಗುರುತಿಸಲಾಗಿದ್ದು, ಬಿಜೆಪಿ ಕಾರ್ಯಕರ್ತರಿಬ್ಬರ ಸ್ಪಷ್ಟ ಮಾಹಿತಿ ತಿಳಿದು ಬಂದಿಲ್ಲ.

ಬಿಜೆಪಿ ಮುಖ್ಯಮಂತ್ರಿ ಯಡಿಯೂರಪ್ಪ ವಿಶ್ವಾಸಮತ ಗೆಲ್ಲಲಾಗದೇ ರಾಜೀನಾಮೆ ನೀಡಿದ್ದರಿಂದ ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರಕಾರ ಅಸ್ತಿತ್ವಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ವಿಟ್ಲದ ಸುತ್ತಮುತ್ತಲಲ್ಲಿ ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರು ವಿಜಯೋತ್ಸವದಲ್ಲಿ ತೊಡಗಿದ್ದರು.

ಈ ವೇಳೆ ಕಾಂಗ್ರೆಸ್  ಕಾರ್ಯಕರ್ತರು ಬಿಜೆಪಿ ಮುರ್ದಾಬಾದ್ ಎಂದು ಘೋಷಣೆ ಕೂಗಿದ್ದು, ಇದಕ್ಕೆ ಪ್ರತಿಯಾಗಿ ಇಲ್ಲಿನ ಸ್ಥಳೀಯ ಬಿಜೆಪಿ ಕಾರ್ಯಕರ್ತರೂ ಕಾಂಗ್ರೆಸ್ ಮುರ್ದಾಬಾದ್ ಎಂದು ಘೋಷಣೆ ಕೂಗಿದ್ದಾರೆ ಎನ್ನಲಾಗಿದ್ದು, ಇದರಿಂದ ಆಕ್ರೋಶಗೊಂಡ ಎರಡು ಪಕ್ಷದ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು ಬಳಿಕ ದೊಣ್ಣೆ, ಸೋಡಾ ಬಾಟ್ಲಿಗಳಿಂದ ಪರಸ್ಪರ ಹಲ್ಲೆ ಮಾಡಿ ಕೈ ಕೈ ಮಿಗಿಲಾಯಿಸಿದ್ದಾರೆ ಎಂದು ಹೇಳಲಾಗಿದೆ.

ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ  ಎಡಿಷನಲ್ ಎಸ್ಪಿ ಸಜಿತ್ ವಿ.ಜೆ., ಎಡಿಷನಲ್ ಡಿವೈಎಸ್ಪಿ ಡಿ.ಕುಮಾರ್, ವೃತ್ತ ನಿರೀಕ್ಷಕ ಪ್ರಕಾಶ್, ಗ್ರಾಮಾಂತರ ಠಾಣಾಧಿಕಾರಿ ಪ್ರಸನ್ನ ಪರಿಶೀಲನೆ ನಡೆಸಿದ್ದಾರೆ.

ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿದೆ.

 

 

 

By suddi9

Leave a Reply

Your email address will not be published. Required fields are marked *