ಬಂಟ್ವಾಳ: ವಿದ್ಯಾರ್ಥಿಗಳು ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವ ಮೂಲಕ ಅವರಲ್ಲಿ ದೈಹಿಕ ಸಾಮಥ್ರ್ಯ ವೃದ್ಧಿ ಜೊತೆಗೆ ಮಾನಸಿಕವಾಗಿ ಆತ್ಮಸ್ಥೈರ್ಯ ಮೂಡಲು ಸಾಧ್ಯವಾಗುತ್ತದೆ ಎಂದು ಶಾಸಕ ಉಳಿಪಾಡಿಗುತ್ತು ರಾಜೇಶ್ ನಾಯ್ಕ್ ಹೇಳಿದ್ದಾರೆ.ನಾೈಕ್ ಹೇಳಿದರು.
ತಾಲ್ಲೂಕಿನ ಕರೆಂಕಿ ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ ವತಿಯಿಂದ ಪಂಜಿಕಲ್ಲು ಗ್ರಾಮದ ಕೇಲ್ದೋಡಿ ಶ್ರೀ ವೈದ್ಯನಾಥ ಕೊಡಮಣಿತ್ತಾಯ, ಬ್ರಹ್ಮಬೈದರ್ಕಳ ಕ್ಷೇತ್ರದ ಬಾಕಿಮಾರು ಗದ್ದೆಯಲ್ಲಿ ದಡ್ಡಲಕಾಡು ಹಿರಿಯ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಶನಿವಾರ ನಡೆಸಿದ ಕೃಷಿ ಚಟುವಟಿಕೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಜಿಲ್ಲಾ ಪಂಚಾಯಿತಿ ಸದಸ್ಯ ಎಂ.ತುಂಗಪ್ಪ ಬಂಗೇರ, ದುರ್ಗಾ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಪ್ರಕಾಶ್ ಅಂಚನ್, ದಡ್ಡಲಕಾಡು ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ರಾಮಚಂದ್ರ ಪೂಜಾರಿ ಕರೆಂಕಿ, ಸಹಶಿಕ್ಷಕಿ ಹಿಲ್ಡಾ ಫೆರ್ನಾಂಡಿಸ್, ಕೇಲ್ದೊಡಿಗುತ್ತು ಕೋಟಿ ಪೂಜಾರಿ, ಕ್ಷೇತ್ರದ ಆಡಳಿತ ಸಮಿತಿ ಉಪಾಧ್ಯಕ್ಷ ಕರುಣೇಂದ್ರ ಪೂಜಾರಿ, ವಾಮದಪದವು ಸಹಕಾರಿ ಬ್ಯಾಂಕಿನ ಅಧ್ಯಕ್ಷ ಯಶೋಧರ ಶೆಟ್ಟಿ ದಂಡೆ ಮತ್ತಿತರರು ಇದ್ದರು.
