ಮಂಗಳೂರು:ಮಕ್ಕಳು ತಮ್ಮ ತಮ್ಮ ಮನೆಯಲ್ಲಿ ಗಿಡಗಳನ್ನು ನೆಟ್ಟು ಬೆಳೆಸಿ ನಿಜವಾದ ಅರ್ಥದಲ್ಲಿ ವನಮಹೋತ್ಸವ ಆಚರಿಸಬೇಕು. ಯಾವುದೇ ಫಲಾಪೇಕ್ಷೆಯಿಲ್ಲದೆ ಸಾಲು ಮರಗಳನ್ನು ನೆಟ್ಟು ಬೆಳೆಸಿದ ಸಾಲುಮರದ ತಿಮ್ಮಕ್ಕ ಅವರನ್ನು ಸ್ಪೂರ್ತಿಯಾಗಿ ತೆಗೆದುಕೊಂಡು ಪರಿಸರ ಬೆಳೆಸುವ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಸಂಸ್ಥೆಯ ಸಂಚಾಲಕ ಟಿ.ಜಿ.ರಾಜರಾಮ ಭಟ್ ಅಭಿಪ್ರಾಯಪಟ್ಟರು.
ಕೈರಂಗಳದ ಪುಣ್ಯಕೋಟಿನಗರ ಶಾರದಾ ಗಣಪತಿ ವಿದ್ಯಾಕೇಂದ್ರದಲ್ಲಿ ವನಮಹೊತ್ಸವವದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

7ule1
ಮುಖ್ಯ ಅತಿಥಿಯಾಗಿ ಆಗಮಿಸಿದ ಬಂಟ್ವಾಳ ವಲಯದ ಅರಣ್ಯ ಅಧಿಕಾರಿ ರಾಜೇಶ್ ಬಳಿಗಾರ್ ಅವರು ವನಮಹೋತ್ಸವದ ಔಚಿತ್ಯವನ್ನು ವಿವರಿಸಿ ಮಾತನಾಡಿದರುಸಮಾರಂಭದಲ್ಲಿ ಸಂಸ್ಥೆಯ ಮಾರ್ಗದರ್ಶಕ ಶಂಕರಭಟ್ ಶುಭ ಹಾರೈಸಿದರು. ಸಹಶಿಕ್ಷಕಿ ಕುಮಾರಿ ಸೌಮ್ಯ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಆಡಳಿತ ಮಂಡಳಿಯ ಹಿರಿಯ ಸದಸ್ಯರಾದ ಬಾಲಕೃಷ್ಣ ರೈ ಮುಂಡಾಜೆ, ಪ್ರಾಂಶುಪಾಲೆ ದಿವ್ಯದೀಪ, ಉಪಪ್ರಾಂಶುಪಾಲ ಸೋಮಶೇಖರ್ ಎಂ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಶಾರ್ವರಿ ಸ್ವಾಗತಿಸಿ, ಭೂಮಿಕಾ ವಂದಿಸಿದರು. ಪಲ್ಲವಿ ಕಾರ್ಯಕ್ರಮ ನಿರೂಪಿಸಿದರು.

By suddi9

Leave a Reply

Your email address will not be published. Required fields are marked *