ಕೈಕಂಬ : ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕ್ಷೀಣಿಸುತ್ತಿದ್ದು, ಕೆಲವು ಶಾಲೆಗಳು ಮುಚ್ಚುವ ಹಂತ ತಲುಪಿದೆ. ಈ ಹಿನ್ನೆಲೆಯಲ್ಲಿ ಮಾಜಿ ಸೀಎಂ ಸಿದ್ದರಾಮಯ್ಯ ಸರ್ಕಾರಿ ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತ ಸಮವಸ್ತ್ರ, ಶೂ, ಊಟ, ಬ್ಯಾಗ್ ಮತ್ತು ಪುಸ್ತಕ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಸ್ಥಳೀಯ ಶಾಲೆಗಳಲ್ಲಿ ಯಥಾಪ್ರಕಾರ ಕಾರ್ಯಗತಗೊಳ್ಳುತ್ತಿರುವುದು ಸಂತೋಷದ ಸಂಗತಿ ಎಂದು ಗಂಜಿಮಠ ಗ್ರಾಪಂ ಅಧ್ಯಕ್ಷೆ ಮಾಲತಿ ಹೇಳಿದರು. ಅವರು ಗುರುಪುರ ಕೈಕಂಬದ ಸೂರಪ್ಪಾಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ವಿದ್ಯಾರ್ಥಿಗಳಿಗೆ ಸರ್ಕಾರದ ವತಿಯಿಂದ `ಶೂ-ಸಾಕ್ಸ್-ಸ್ಯಾಂಡಲ್’ ವಿತರಿಸುವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.20vpsooralpadi

ಗಂಜಿಮಠ ಗ್ರಾಪಂ ಉಪಾಧ್ಯಕ್ಷ ಜಾಕಿರ್ ಮಾತನಾಡುತ್ತ, ವಿದ್ಯಾರ್ಥಿಗಳು ಸರ್ಕಾರದ ಈ ಯೋಜನೆಗಳ ಪ್ರಯೋಜನ ಪಡೆದು, ವಿದ್ಯಾವಂತರಾಗುವುದರೊಂದಿಗೆ ಶಾಲೆ ಹಾಗೂ ಸಮಾಜಕ್ಕೆ ಆದರ್ಶ ವ್ಯಕ್ತಿಗಳಾಗಬೇಕು ಎಂದರು.

ಶಾಲೆಗಳಿಗೆ ಸಂಬಂಧಿಸಿದ ಸರ್ಕಾರದ ಎಲ್ಲ ಯೋಜನೆಗಳು ಮಕ್ಕಳಿಗೆ ಸಮಯೋಚಿತ ತಲುಪುವಂತಾಗಬೇಕು ಎಂದು ತಾಪಂ ಸದಸ್ಯ ಸುನಿಲ್ ಪೂಜಾರಿ ಹೇಳಿದರು.
ಗ್ರಾಪಂ ಸದಸ್ಯೆ ದುಲ್ಸಿ ಕ್ರಾಸ್ತ ಸಂದರ್ಭೋಚಿತ ಮಾತನಾಡಿ, ಖಾಸಗಿ ಶಾಲೆಗಳಲ್ಲಿ ಸಿಗದ ಸೊತ್ತುಗಳು ಸರ್ಕಾರಿ ಶಾಲೆಗಳಲ್ಲಿ ಉಚಿತವಾಗಿ ಸಿಗುತ್ತಿವೆ. ಇದರ ಪ್ರಯೋಜನ ಪಡೆದು ವಿದ್ಯಾರ್ಥಿಗಳು ತಮ್ಮ ಭವಿಷ್ಯ ಉಜ್ವಲಗೊಳಿಸಬೇಕು ಎಂದು ಹಾರೈಸಿದರು.

ವೇದಿಕೆಯಲ್ಲಿ ಉದ್ಯಮಿ ಮುಸ್ತಾಫ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಮೀನಾಕ್ಷಿ, ಅಂಗನವಾಡಿ ಶಿಕ್ಷಕಿ ಸುಮತಿ ಇದ್ದರು. ಪ್ರಭಾರ ಮುಖ್ಯೋಪಾಧ್ಯಾಯಿನಿ ಸಿಂಥಿಯಾ ಪ್ರಸ್ತಾವಿಕ ಮಾತಾಡಿದರು. ಶಿಕ್ಷಕಿ ಭವಾನಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

By suddi9

Leave a Reply

Your email address will not be published. Required fields are marked *