ಬಂಟ್ವಾಳ:ಒಡಿಯೂರು ಕ್ಷೇತ್ರದಲ್ಲಿ ಗುರುದೇವಾನಂದ ಸ್ವಾಮೀಜಿ ಅವರ ಜನ್ಮದಿನೋತ್ಸವ ಪ್ರಯುಕ್ತ ಆ.8ರಂದು ನಡೆಯುವ ಗ್ರಾಮೋತ್ಸವ ಕಾರ್ಯಕ್ರಮದಲ್ಲಿ ಆಧ್ಯಾತ್ಮ ಚಟುವಟಿಕೆ ಜೊತೆಗೆ ಸ್ವಚ್ಛತಾ ಅಭಿಯಾನ ಮೂಲಕ ಕಳೆದ ಹಲವು ವರ್ಷಗಳಿಂದ ಸಾಮಾಜಿಕ ಪರಿವರ್ತನೆಗೆ ಪೂರಕವಾಗಿ ಶ್ರಮಿಸುತ್ತಿದೆ ಎಂದು ಜನ್ಮದಿನೋತ್ಸವ ಸಮಿತಿ ಸಹ ಸಂಚಾಲಕ ತಾರನಾಥ ಕೊಟ್ಟಾರಿ ಹೇಳಿದ್ದಾರೆ.
ತಾಲ್ಲೂಕಿನ ಬಿ.ಸಿ.ರೋಡಿನಲ್ಲಿ ಮಂಗಳವಾರ ಸಂಜೆ ಏರ್ಪಡಿಸಿದ್ದ ಒಡಿಯೂರು ಶ್ರೀ ಜನ್ಮದಿನೋತ್ಸವ ಸಮಿತಿ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು.
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಸಹಿತ ಕಾಸರಗೋಡು ಜಿಲ್ಲೆಯ ವಿವಿಧ ಗ್ರಾಮ ಸಮಿತಿ, ಒಡಿಯೂರು ಶ್ರೀ ಗುರುದೇವ ಸೇವಾ ಬಳಗ, ವಜ್ರಮಾತಾ ಮಹಿಳಾ ವಿಕಾಸ ಕೇಂದ್ರ, ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಸಹಭಾಗಿತ್ವದಲ್ಲಿ ಗ್ರಾಮೋತ್ಸವವು ವಿವಿಧ ಸಮಾಜಮುಖಿ ಕಾರ್ಯಕ್ರಮಗಳೊಂದಿಗೆ ಹಬ್ಬದ ರೀತಿಯಲ್ಲಿ ನಡೆಯಲಿದೆ ಎಂದರು.
ಸಮಿತಿ ಅಧ್ಯಕ್ಷ ಲೋಕನಾಥ ಜಿ.ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಂಚಿ ಧರ್ಮ ಜಾಗೃತಿ ಪ್ರತಿಷ್ಠಾನ ಅಧ್ಯಕ್ಷ ಕೈಯೂರು ನಾರಾಯಣ ಭಟ್, ಸಮಿತಿ ಸದಸ್ಯ ವಾಸುದೇವ ಕೊಟ್ಟಾರಿ ಮತ್ತಿತರರು ವಿವಿಧ ಸಲಹೆ ನೀಡಿದರು.
ಬಂಟ್ವಾಳ ಭೂ ಅಭಿವೃದ್ಧಿ ಬ್ಯಾಂಕಿನ ಅಧ್ಯಕ್ಷ ಸುದರ್ಶನ್ ಜೈನ್, ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಜಿ.ಆನಂದ, ತುಳು ಸಾಹಿತ್ಯ ಅಕಾಡೆಮಿ ಸದಸ್ಯ ಗೋಪಾಲ ಅಂಚನ್, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಪ್ರಭಾಕರ ಪ್ರಭು, ಒಡಿಯೂರು ಸೌಹಾರ್ದ ಸಹಕಾರಿ ಸಂಘದ ವ್ಯವಸ್ಥಾಪಕಿ ಸೌಮ್ಯ, ಪ್ರಮುಖರಾದ ಸರಪಾಡಿ ಅಶೋಕ ಶೆಟ್ಟಿ, ಶಿವಶಂಕರ್, ಎಚ್ಕೆ ನಯನಾಡು, ಜಯಂತ್ ಜೆ.ಕೋಟ್ಯಾನ್ ಮತ್ತಿತರರು ಇದ್ದರು.
ಸಮಿತಿ ಕಾರ್ಯದಶರ್ಿ ಸದಾಶಿವ ಅಳಿಕೆ ಸ್ವಾಗತಿಸಿ, ಉಪಾಧ್ಯಕ್ಷ ಮಂಜು ವಿಟ್ಲ ವಂದಿಸಿದರು.