ಮೂಡುಬಿದಿರೆ: ಇಲ್ಲಿನ ಯೆನೆಪೋಯ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಮೊದಲನೆಯ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗಾಗಿ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಸೋಮವಾರ ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು.

ಯೆನೆಪೋಯ ಸಮೂಹದ ನಿರ್ದೇಶಕ ಯೆನೆಪೋಯ ಅಬ್ದುಲ್ಲಾ ಜಾವೇದ್ ಅಧ್ಯಕ್ಷತೆ ವಹಿಸಿದ್ದರು.
ಮೌಲ್ಯಗಳು ಮತ್ತು ಸಕಾರಾತ್ಮಕ ಚಿಂತನೆಯ ಪ್ರಾಮುಖ್ಯತೆಯೊಂದಿಗೆ ವಿದ್ಯಾರ್ಥಿಗಳು ಜೀವನದಲ್ಲಿ ಬೇಕಾಗುವ ಅಗತ್ಯ ವಿಷಯಗಳಿಗೆ ಆದ್ಯತೆ ನೀಡಬೇಕು. ಯಾವುದೇ ರೀತಿಯ ಒತ್ತಡಕ್ಕೆ ಒಳಪಡದೇ ಪ್ರಾಮಾಣಿಕತೆಯಿಂದ ಕೆಲಸ ಮಾಡಬೇಕು ಎಂದು ಅಜೆಕಾರ್ ಪದ್ಮ ಗೋಪಾಲ್ ಟ್ರಸ್ಟ್‍ನ ಅಧ್ಯಕ್ಷ ಡಾ.ಸುಧಾಕರ ಶೆಟ್ಟಿ ಹೇಳಿದರು.
ಈ ಸಂದರ್ಭದಲ್ಲಿ ಕಾಲೇಜಿನ ಸಿಬ್ಬಂದಿ ವರ್ಗ, ಪೋಷಕರು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಪ್ರಾಚಾರ್ಯ ಡಾ.ಆರ್.ಜಿ. ಡಿಸೋಜಾ ಸ್ವಾಗತಿಸಿದರು. ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಅಧಿಕಾರಿ ಡಾ.ಜೀವನ್ ಪಿಂಟೋ ವಂದಿಸಿದರು.