ಬಂಟ್ವಾಳ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬಂಟ್ವಾಳ, ಸಾರ್ವಜನಿಕ ಶಿಕ್ಷಣ ಇಲಾಖೆ ಬಂಟ್ವಾಳ, ದ ಕ ಜಿಲ್ಲಾ ಪಂಚಾಯತ್ ಮತ್ತು ವಿಟ್ಲ ಬಸವನಗುಡಿ ವಿಠಲ್ ಜೇಸಿಸ್ ಆಂಗ್ಲ ಮಾಧ್ಯಮ ಶಾಲೆ ಇದರ ಆಶ್ರಯದಲ್ಲಿ ಪ್ರೌಢ ಶಾಲೆ ಮತ್ತು ಪ್ರಾಥಮಿಕ ಶಾಲಾ ವಿಭಾಗದ ವಿದ್ಯಾರ್ಥಿಗಳ ಬಂಟ್ವಾಳ ತಾಲೂಕು ಮಟ್ಟದ ಶಟ್ಲ್ ಬ್ಯಾಡ್ಮಿಂಟನ್ ಪಂದ್ಯಾಟವು ವಿಠಲ ಪದವಿ ಪೂರ್ವ ಕಾಲೇಜಿನ ಒಳಾಂಗಣ ಕ್ರೀಡಾಂಗಣದಲ್ಲಿ 18-08-2018 ರಂದು ನಡೆಯಿತು.

ಈ ಪಂದ್ಯಾಟದ ಉದ್ಘಾಟನೆಯನ್ನು ವಿಠಲ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಆದರ್ಶ ಚೊಕ್ಕಾಡಿ ನೆರವೇರಿಸಿದರು. ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷ ಎಲ್ ಎನ್ ಕೂಡೂರು ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ವಿಠಲ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಕಿರಣ್ ಕುಮಾರ್ ಬ್ರಹ್ಮಾವರ್, ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷ ಉಮಾನಾಥ ರೈ, ಬಂಟ್ವಾಳ ದೈಹಿಕ ಶಿಕ್ಷಕ ಸಂಘದ ಅಧ್ಯಕ್ಷ ಚಿನ್ನಪ್ಪ, ನೋಡೆಲ್ ಅಧಿಕಾರಿ ಜನಾರ್ಧನ, ಗೌರವಾಧ್ಯಕ್ಷ ಜಗದೀಶ ಬಾಳ್ತಿಲ, ವಿಟ್ಲ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ರವಿಪ್ರಸಾದ್, ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲ ಜಯರಾಮ ರೈ ಮತ್ತು ಆಡಳಿತ ನಿರ್ದೇಶಕ ಮೋನಪ್ಪ ಶೆಟ್ಟಿ ಉಪಸ್ಥಿತರಿದ್ದರು.
ಶಿಕ್ಷಕಿ ದೇವಿಕಾ ಪ್ರವೀಣ್ ಸ್ವಾಗತಿಸಿದರು. ಶಿಕ್ಷಕಿ ರೂಪಾ ಸುರೇಶ್ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ವಿದ್ಯಾ ನವೀನ್ ವಂದಿಸಿದರು.