ಸುದ್ದಿ9ಬಂಟ್ವಾಳ: ಸಾಮಾಜಿಕ ವೈಫಲ್ಯವನ್ನು ಕಾಣುತ್ತಿರುವ ಈ ಕಾಲಘಟ್ಟದಲ್ಲಿ ಎಲ್ಲರ ಮನಸ್ಸಿನಲ್ಲೂ ಪ್ರೀತಿ ಬಾವ ಮೂಡಿಸುವ ಶಕ್ತಿಯನ್ನು ಶ್ರೀಕೃಷ್ಣ ಪರಮಾತ್ಮ ಅನುಗ್ರಹಿಸಲಿ ಎಂದು ಜಿಲ್ಲಾ ಉಸ್ತುವರಿ ಸಚಿವ ಬಿ.ರಮನಾಥ ರೈ ಆಶಿಸಿದರು.
ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣ ಸಮಿತಿ ಆಶ್ರಯದಲ್ಲಿ ಬಿ.ಸಿ.ರೋಡಿನ ಎಸ್ಜಿಎಸ್ಆರ್ವೈ ಸಭಾಂಗಣದಲ್ಲಿ ಶನಿವಾರ ನಡೆದ ತಾಲೂಕು ಮಟ್ಟದ ಶ್ರೀ ಕೃಷ್ಣ ಜಯಂತಿ ಆಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವೇದಿಕೆಯಲ್ಲಿ ತಾ.ಪಂ.ಅಧ್ಯಕ್ಷ ಯಶವಂತ ದೇರಾಜೆ, ಉಪಾಧ್ಯಕ್ಷೆ ವಿಲಾಸಿನಿ, ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷೆ ಐಡಾ ಸುರೇಶ್, ಜಿ.ಪಂ.ಸದಸ್ಯರಾದ ಸಂತೋಷ್ ಕುಮಾರ್ ರೈ, ಚೆನ್ನಪ್ಪ ಕೋಟ್ಯಾನ್, ಯಾದವ ಸಮಾಜದ ಜಿಲ್ಲಾ ಅಧ್ಯಕ್ಷ ನಾರಾಯಣ ಮಣಿಯಾಣಿ, ತಾಲೂಕು ಸಮಿತಿ ಅಧ್ಯಕ್ಷ ಜಯಾನಂದ ಹಾಜರಿದ್ದರು.
ತಹಸೀಲ್ದಾರ್ ಮಲ್ಲೇಸ್ವಾಮೀ ಸ್ವಾಗತಿಸಿದರು, ತಾ.ಪಂ.ಕಾರ್ಯನಿವರ್ಾಹಣಾಧಿಕಾರಿ ಸಿಪ್ರಿಯಾನ್ ಮಿರಾಂಡ ವಂದಿಸಿದರು. ಮಂಜು ವಿಟ್ಲ ನಿರೂಪಿಸಿದರು.

 

1 (1)

By suddi9

Leave a Reply

Your email address will not be published. Required fields are marked *