ಬಂಟ್ವಾಳ: ಇಲ್ಲಿನ ಕಾಡಬೆಟ್ಟು ಗ್ರಾಮದ ಪಿಲಿಂಗಾಲು ಶ್ರೀ ಗಾಯತ್ರಿ ದೇವಿ ದೇವಸ್ಥಾನದಲ್ಲಿ ಈಗಾಗಲೇ ವಾರ್ಷಿಕ ನವರಾತ್ರಿ ಉತ್ಸವ ಆರಂಭಗೊಂಡಿದೆ. ಇದೇ 18ರಂದು ಗುರುವಾರ ಬೆಳಿಗ್ಗೆ ಗಂಟೆ 7.30ರಿಂದ ಭಜನೆ ಮತ್ತು ಮಧ್ಯಾಹ್ನ ಮಹಾಪೂಜೆ, ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.
ಅದೇ ದಿನ ಸಂಜೆ 4ಗಂಟೆಗೆ ಸರಪಾಡಿ ಶರಭೇಶ್ವರ ಯಕ್ಷಗಾನ ಸಂಘದ ವತಿಯಿಂದ ‘ವಾಲಿ ಮೋಕ್ಷ’ ಯಕ್ಷಗಾನ ತಾಳಮದ್ದಳೆ ಕೂಟ ನಡೆಯಲಿದೆ.
19ರಂದು ಬೆಳಿಗ್ಗೆ ಗಂಟೆ 7.30ರಿಂದ ಭಜನೆ ಬಳಿಕ ದೇವರಿಗೆ ಮಹಾಪೂಜೆ ಮತ್ತು ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ ಎಂದು ಕ್ಷೇತ್ರದ ಆಡಳಿತ ಧರ್ಮದರ್ಶಿ ಕೆ.ಎಸ್.ಪಂಡಿತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

By suddi9

Leave a Reply

Your email address will not be published. Required fields are marked *