ಮಾಣಿ : ಮಾಣಿ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯಲ್ಲಿ ಪಂಡಿತ್ ಜವಹಾಲಾಲ್ ನೆಹರು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.

childrens day
ಮುಖ್ಯ ಅಥಿತಿಯಾಗಿ ಆಗಮಿಸಿದ ಪ್ರಸಿದ್ದ ರಂಗಕರ್ಮಿ ಐ.ಕೆ. ಬೊಳುವಾರ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಕ್ಕಳು ತಮ್ಮ ತಪ್ಪನ್ನು ಅರಿತು ಮುನ್ನಡೆಯಬೇಕು ಹಾಗೂ ಸೂಕ್ತ ಸಂದರ್ಭದಲ್ಲಿ ಪ್ರಶ್ನಿಸುವ ಮನೋಭಾವ ಬೆಳೆಸಿಕೊಳ್ಳುವುದು ಅಗತ್ಯ ಎಂದರು. ಕಾರ್ಯಕ್ರಮದ ಅಧ್ಯಕ್ಷ ಹಾಗೂ ಸಂಚಾಲಕರಾದ ಪ್ರಹ್ಲಾದ್ .ಜೆ ಶೆಟ್ಟಿಯವರು ಮಾತನಾಡಿ ಭವ್ಯ ಭಾರತದ ಪರಂಪರೆಯಲ್ಲಿ ದೇಶಕ್ಕಾಗಿ ಒಳಿತು ಮಾಡುವ ವ್ಯಕ್ತಿಗಳನ್ನು ಸಂದರ್ಭಾನುಸಾರ ನೆನೆದು ಅವರ ಗುಣಗಳನ್ನು ಮೈಗೂಡಿಸಿ ಕೊಳ್ಳೋಣ ಎಂದರು . ಆಡಳಿತಾಧಿಕಾರಿ ಸಿ.ಶ್ರೀಧರ್ ಮಾತನಾಡಿ ಒಳ್ಳೆಯ ಆಹಾರ ಹಾಗೂ ಉತ್ತಮ ಚಿಂತನೆ ಒಗ್ಗೂಡಿದಾಗ ಶ್ರೇಷ್ಟ ವ್ಯಕ್ತಿತ್ವ ನಿರ್ಮಾಣ ಸಾಧ್ಯ ಎಂದರು .
ಈ ಸಂದರ್ಭದಲ್ಲಿ ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ವಿಜಯಲಕ್ಷ್ಮೀ .ವಿ.ಶೆಟ್ಟಿ ,ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಗ್ರೇಸ್.ಪಿ.ಸಲ್ಡಾನಾ ಉಪಸ್ಥಿತರಿದ್ದರು.
ವಿಜ್ಞಾನ ರಸಪ್ರಶ್ನೆಯಲ್ಲಿ ಪಾಲ್ಗೊಂಡ ಶಾಲಾ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ವಿತರಿಸಲಾಯಿತು ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ವೈವಿದ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳಾದ ಸಾತ್ವಿಕ ಸ್ವಾಗತಿಸಿ ಆಯುಷ್ .ಬಿ.ಶೆಟ್ಟಿ ವಂದಿಸಿದರು . ವೈಷ್ಣವಿ ಹಾಗೂ ಫರ್ಝಾನ ಕಾರ್ಯಕ್ರಮ ನಿರೂಪಿಸಿದರು.

By suddi9

Leave a Reply

Your email address will not be published. Required fields are marked *