ಬಂಟ್ವಾಳ:ಬಂಟ್ವಾಳ ತಾಲೂಕು ಹೊಕ್ಕಾಡಿಗೋಳಿ ಮಹಿಷಮರ್ಧಿನಿ ಕಂಬಳ ಸಮಿತಿ ವತಿಯಿಂದ ಇತಿಹಾಸ ಪ್ರಸಿದ್ಧ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳವು ಹೊಕ್ಕಾಡಿಗೋಳಿಯಲ್ಲಿ ಡಿ. 22ರಂದು ನಡೆಯಲಿದೆ ಎಂದು ಕಂಬಳ ಸಮಿತಿ ಆಧ್ಯಕ್ಷ ನೋಣಾಲ್ಗುತ್ತು ರಶ್ಮಿತ್ ಶೆಟ್ಟಿ ಕೈತ್ರೋಡಿ ಆವರು ತಿಳಿಸಿದ್ದಾರೆ.ಸಿದ್ದಕಟ್ಟೆ ಅಶ್ವಿನಿ ಸಭಾಂಗಣದಲ್ಲಿ ಗುರುವಾರ ಮಧ್ಯಾಹ್ನ ಕರೆದ ಪತ್ರಿಕಾ ಗೋಷ್ಠಿಯಲ್ಲಿ ಆವರು ಮಾತನಾಡಿದರು.ಅಂದು ಬೆಳಗ್ಗೆ ಗಂಟೆ 8ಕ್ಕೆ ಶ್ರೀ ಕ್ಷೇತ್ರ ಪೂಂಜದ ಆಸ್ರಣ್ಣ ಕೃಷ್ಣ ಪ್ರಸಾದ್ ಆಚಾರ್ಯ ಅವರು ಕಂಬಳ ಉದ್ಘಾಟಿಸಲಿರುವರು. ಶ್ರೀ ಕ್ಷೇತ್ರದ ಪ್ರಧಾನ ಅರ್ಚಕ ಪ್ರಕಾಶ್ ಆಚಾರ್ಯ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿರುವರು ಹಾಗೂ ಮತ್ತಿತರರು ಅತಿಥಿಗಳಾಗಿ ಭಾಗವಹಿಸಲಿರುವರು.

20btl-Presmeet
ಸಂಜೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಕ್ ಉಳಿಪ್ಪಾಡಿಗುತ್ತು ಅವರು ಅಧ್ಯಕ್ಷತೆ ವಹಿಸಲಿದ್ದು, ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ, ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್, ಸಂಸದರಾದ ನಳಿನ್ ಕುಮಾರ್ ಕಟೀಲು, ಪ್ರತಾಪ ಸಿಂಹ, ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಹರೀಶ್ ಪೂಂಜ, ಸಂಜೀವ ಮಠಂದೂರು, ಕುಮಾರ್ ಬಂಗಾರಪ್ಪ, ಉಮಾನಾಥ ಕೋಟ್ಯಾನ್, ವಿ.ಸುನೀಲ್ ಕುಮಾರ್, ಡಾ. ವೈ. ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ವಿಧಾನ ಪರಿಷತ್ ಸದಸ್ಯರಾದ ಹರೀಶ್ ಕುಮಾರ್, ಎಸ್.ಎಲ್. ಭೋಜೇ ಗೌಡ, ಐವಾನ್ ಡಿಸೋಜ, ಮಾಜಿ ಸಚಿವರಾದ ಬಿ. ನಾಗರಾಜ ಶೆಟ್ಟಿ, ಕೆ.ಅಭಯ ಚಂದ್ರ ಜೈನ್, ಕೆ.ಅಮರನಾಥ ಶೆಟ್ಟಿ, ಮಾಜಿ ಶಾಸಕ ಕೆ.ವಸಂತ ಬಂಗೇರ, ಜಿ.ಪಂ.ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಡಿಸಿಸಿ ಬ್ಯಾಂಕ್ ಆಧ್ಯಕ್ಷ ಡಾ. ಎಮ್. ಎನ್. ರಾಜೇಂದ್ರ ಕುಮಾರ್ ಹಾಗೂ ವಿವಿಧ ಕ್ಷೇತ್ರದ ಗಣ್ಯರು ಅತಿಥಿಗಳಾಗಿ ಭಾಗವಹಿಸಲಿರುವರು.

By suddi9

Leave a Reply

Your email address will not be published. Required fields are marked *