ಮೂಡುಬಿದಿರೆ: ತೆಂಕಮಿಜಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೀರ್ಕೆರೆ ಸರ್ಕಾರಿ ಪ್ರೌಢಶಾಲೆಯ ರೂ.15.75 ಲಕ್ಷ ವೆಚ್ಚದ ನಿರ್ಮಾಣಗೊಳ್ಳಲಿರುವ ಕೊಠಡಿಗೆ ಶಿಲಾನ್ಯಾಸ ನೆರವೇರಿಸಲಾಯಿತು.

Nirkere school
ಶಾಸಕ ಉಮಾನಾಥ ಕೋಟ್ಯಾನ್ ಶಿಲಾನ್ಯಾಸ ನೆರವೇರಿಸಿ ಮಾತನಾಡಿ, ಗ್ರಾಮೀಣ ಪ್ರದೇಶವಾದ ನೀರ್ಕೆರೆಯ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಸಿಗಬೇಕಾದರೆ, ಇಲ್ಲಿನ ಸರ್ಕಾರಿ ಶಾಲೆಗಳ ಮೂಲಭೂತ ಸೌಕರ್ಯಗಳು ಉತ್ತಮ ಸ್ಥಿತಿಯಲ್ಲಿರಬೇಕು. ರಜತ ಮಹೋತ್ಸವದ ನೆನಪಿನಲ್ಲಿ ಶಾಸಕರ ಅನುದಾನದಿಂದ ಪ್ರಾಥಮಿಕ ಶಾಲೆಯ ಕೊಠಡಿಗೆ ಈಗಾಗಲೇ ಹಣ ಮಂಜೂರಾಗಿ ಕಾಮಗಾರಿ ನಡೆಯುತ್ತಿದೆ. ಪ್ರೌಢಶಾಲೆಗೂ ಕೂಡ ಅನುದಾನ ನೀಡಿದ್ದು, ಅದಷ್ಟು ಬೇಗ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಕೊಠಡಿ ಸಿಗುವಂತಾಗುತ್ತದೆ ಎಂದರು.

Nirkere school
ತೆಂಕಮಿಜಾರು ಪಂಚಾಯಿತಿ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ, ಮಾಜಿ ಅಧ್ಯಕ್ಷ ಬಾಲಕೃಷ್ಣ ದೇವಾಡಿಗ, ಸದಸ್ಯರಾದ ಲೋಲಾಕ್ಷಿ ಕರುಣಾಕರ ಶೆಟ್ಟಿ, ಯಶೋಧ, , ಎಸ್‍ಡಿಎಂಸಿ ಕಾರ್ಯಾಧ್ಯಕ್ಷ ಕರುಣಾಕರ ಶೆಟ್ಟಿ, ಮುಖ್ಯ ಶಿಕ್ಷಕಿ ಡಾ.ಪ್ರತಿಮಾ, ಗ್ರಾಮಸ್ಥರರಾದ ಗೋಪಾಲ ಗೌಡ, ರಮೇಶ್ ಶೆಟ್ಟಿ, ಸದಾಶಿವ ಶೆಟ್ಟಿ, ಗುತ್ತಿಗೆದಾರ ರವಿ ಶಂಕರ್ ಕೋಟೆಬಾಗಿಲು ಎಸ್‍ಸಿಡಿಎಂ ಸದಸ್ಯರು, ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *