ಬಂಟ್ವಾಳ: ಭಾರತೀಯ ಜನತಾ ಪಾರ್ಟಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ನೇತೃತ್ವದಲ್ಲಿ 2019ರ ಲೋಕಸಭಾ ಚುನಾವಣಾ ಸಿದ್ದತಾ ಸಭೆಯು ಬಿ.ಸಿ.ರೋಡಿನ ಗೀತಾಂಜಲಿ ಸಭಾಭವನದಲ್ಲಿ ಮಂಗಳವಾರ ನಡೆಯಿತು. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣಾ ಸಂಚಾಲಕರಾದ ಗೋಪಾಲಕೃಷ್ಣ ಹೇರಳೆಯವರು ದಿಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಫಾಟಿಸಿದರು.ಮುಂದಿನ ಲೋಕಸಭಾ ಚುನಾವಣಾ ಮಹತ್ವದ ಬಗ್ಗೆ ವಿಭಾಗ ಸಹ ಪ್ರಭಾರಿ ಪ್ರತಾಪಸಿಂಹ ನಾಯಕ್ ವಿವರಿಸಿದರು.

2019ರ ಚುನಾವಣೆಯಲ್ಲಿ ಕಾರ್ಯಕರ್ತರ ಜವಾಬ್ದಾರಿ ಕೆಲಸ ಕಾರ್ಯದ ಬಗ್ಗೆ ವಿಭಾಗ ಸಂಗಟನಾ ಕಾರ್ಯದರ್ಶಿ ಪ್ರಸಾದ್ ಕುಮಾರ್ ಮಾಹಿತಿ ನೀಡಿದರು. ಕ್ಷೇತ್ರ ಬಿಜೆಪಿ ಅಧ್ಯಕ್ಷ ದೇವದಾಸ್ ಶೆಟ್ಟಿ,ಜಿಲ್ಲಾ ಉಪಾಧ್ಯಕ್ಷರಾದ ಜಿ.ಆನಂದ,ಜಿಲ್ಲಾ ವಕ್ತಾರ ಹರಿಕೃಷ್ಣ ಬಂಟ್ವಾಳ,ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಶ್ರೀಮತಿ ಪೂಜಾ ಪೈ,ಜಿಲ್ಲಾ ಯುವ ಮೋರ್ಚಾ ಪ್ರ.ಕಾರ್ಯದರ್ಶಿ ಸಂದೇಶ್ ಶೆಟ್ಟಿ, ಕ್ಷೇತ್ರ ಪ್ರಧಾನಕಾರ್ಯದರ್ಶಿಗಳಾದ ರಾಮದಾಸ್ ಬಂಟ್ವಾಳ,ಮೋನಪ್ಪ ದೇವಸ್ಯ, ಜಿಲ್ಲಾ ಪಂಚಾಯತ್ ಸದಸ್ಯರಾದ ರವೀಂದ್ರ ಕಂಬಳಿ,ಕಮಲಾಕ್ಷಿ ಪೂಜಾರಿ ಈ ಸಂಧರ್ಭದಲ್ಲಿ ಉಪಸ್ಥಿತರಿದ್ದರು.
