ಸುದ್ದಿ9ಬಂಟ್ವಾಳ:ಗ್ರಾಮೀಣ ಪ್ರದೇಶದಲ್ಲಿ ರೈತರು ಬೆಳೆದ ಕೃಷಿ ಉತ್ಪನ್ನಗಳಿಗೆ ಮಧ್ಯವರ್ತಿಗಳ ಬದಲಾಗಿ ನೇರ ಮಾರುಕಟ್ಟೆ ಒದಗಿಸುವ ನಿಟ್ಟಿನಲ್ಲಿ ಸರ್ಕಾರವು ಎಪಿಎಂಸಿ ಮೂಲಕ ಸಂತೆ ಮಾರುಕಟ್ಟೆ ನಿರ್ಮಾಣಕ್ಕೆ ಆದ್ಯತೆ ನೀಡುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.
ತಾಲ್ಲೂಕಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ವತಿಯಿಂದ ಕಲ್ಲಡ್ಕದಲ್ಲಿ ನಿರ್ಮಾಣಗೊಂಡ ನೂತನ ಸಂತೆ ಮಾರುಕಟ್ಟೆಯನ್ನು ಶುಕ್ರವಾರ ಮಧ್ಯಾಹ್ನ ಉದ್ಘಾಟಿಸಿ ಅವರು ಮಾತನಾಡಿದರು.
ಎಪಿಎಂಸಿ ಅಧ್ಯಕ್ಷ ಬಿ.ನೇಮಿರಾಜ ರೈ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸ್ಥಳೀಯ ಕೃಷಿ ಉತ್ಪನ್ನಗಳಾದ ತರಕಾರಿ, ಹಣ್ಣು ಹಂಪಲು ಇಲ್ಲಿನ ಮಾರುಕಟೆಯಲ್ಲಿ ಸುಲಭ ದರದಲ್ಲಿ ಖರೀದಿಸಲು ಗ್ರಾಹಕರಿಗೆ ಅನುಕೂಲ ಆಗಬೇಕು. ಇದಕ್ಕಾಗಿ ಬಂಟ್ವಾಳದಲ್ಲಿ ಒಂದು ಸುಸಜ್ಜಿತ ಮಾರುಕಟ್ಟೆ ಪ್ರಾಂಗಣ ಬೇಕಾಗಿದೆ ಎಂದರು.
ಬಂಟ್ವಾಳ ತಾ.ಪಂ.ಅಧ್ಯಕ್ಷ ಯಶವಂತ ದೇರಾಜೆ., ಜಿ. ಪಂ.ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಗೋಳ್ತಮಜಲು ಗ್ರಾ.ಪಂ.ಅಧ್ಯಕ್ಷ ಜಗನ್ನಾಥ್ ಕುಲಾಲ್ ಉಪಸ್ಥಿತರಿದ್ದರು.
ಎಪಿಎಂಸಿ ಸಿಬಂದಿ ಶಿವಾನಂದ ಸ್ವಾಗತಿಸಿ, ಕಾರ್ಯದರ್ಶಿ ಲಿಲ್ಲಿ ಡಿ’ಕುನ್ಹಾ ವಂದಿಸಿದರು. ರಾಜೇಶ್ ಕಲ್ಲಡ್ಕ ಕಾರ್ಯಕ್ರಮ ನಿರ್ವಹಿಸಿದರು.
