ಬಂಟ್ವಾಳ: ಮುಖ್ಯಮಂತ್ರಿ ಕುಮಾರಸ್ವಾಮಿಯವರು ತನ್ನ ಬಜೆಟ್ ನಲ್ಲಿ ರೈತರಿಗೆ ಬಂಪರ್ ಯೋಜನೆಗಳನ್ನು ಪ್ರಕಟಿಸಿದ್ದು, ರೈತಪರ ಮತ್ತು ಅಭಿವೃದ್ಧಿಪರ ಸರ್ಕಾರ ಎಂಬುದನ್ನು ಸಾಬೀತು ಮಾಡಿದ್ದಾರೆ. ಕರಾವಳಿ ಸೇರಿದಂತೆ ರಾಜ್ಯದ ಎಲ್ಲಾಭಾಗಗಳಿಗೂ ಆದ್ಯತೆ ನೀಡಲಾಗಿದೆ. ಭತ್ತದ ಕೃಷಿಗೆ ಉತ್ತೇಜನ ನೀಡುವ ಕಾರ್ಯಕ್ರಮಗಳಿಂದ ಕರಾವಳಿಯ ರೈತರಿಗೆ ಹೆಚ್ಚು ಅನುಕೂಲವಾಗಿದೆ, ಇಲ್ಲಿನ ಪ್ರವಾಸೋದ್ಯಮಕ್ಕೂ ಒತ್ತು ನೀಡಿರುವುದೂ ಸ್ವಾಗತಾರ್ಹ

-ಬಿ.ರಮಾನಾಥ ರೈ
ಮಾಜಿ ಸಚಿವರು, ಮಾಜಿ ಶಾಸಕರು ಬಂಟ್ವಾಳ ಕ್ಷೇತ್ರ