ಬಜ್ಪೆ.  : ಶ್ರೀ ನಿರಂಜನ ಸ್ವಾಮಿ ಪ್ರಥಮ ದರ್ಜೆ ಕಾಲೇಜು, ಸುಂಕದಕಟ್ಟೆ, ನಮ್ಮ ಕಾಲೇಜಿನ ಎನ್.ಎಸ್.ಎಸ್. ಘಟಕ, ಚುನಾವಣಾ ಸಾಕ್ಷರತಾ ಕ್ಲಬ್ ಹಾಗೂ ವಿವಿಧ ಸಂಘಗಳ ಸಹಭಾಗಿತ್ವದಲ್ಲಿ, ಕಾಲೇಜಿನಿಂದ ಬಜಪೆ ಪೇಟೆಯವರೆಗೆ ಜಾಥಾ ನಡೆಸಿ, ಚುನಾವಣಾ ಅರಿವಿನ ಕರಪತ್ರಗಳನ್ನು ಸಾರ್ವಜನಿಕರಿಗೆ ಹಂಚಲಾಯಿತು ಹಾಗೂ ಮತದಾನದ ಜಾಗೃತಿಯ ಬಗ್ಗೆ ಕಾಲೇಜಿನ ವಿದ್ಯಾರ್ಥಿಗಳಿಂದ ಬೀದಿನಾಟಕ ನಡೆಸಲಾಯಿತು.52595462_417060345717476_6208849695700156416_n

ನಮ್ಮೊಂದಿಗೆ  ಪೊಲೀಸ್ ಇಲಾಖೆ, ಕಂದಾವರ ಗ್ರಾಮ ಪಂಚಾಯತ್ ಹಾಗೂ ಬಜಪೆ ಗ್ರಾಮ ಪಂಚಾಯತ್‍ನ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯತ್‍ನ ಅಧ್ಯಕ್ಷರು, ಸದಸ್ಯರು ಹಾಗೂ ಸಾರ್ವಜನಿಕರು `ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡರು.52161622_1018126291709607_1289544981228290048_n (1)

ಕಾಲೇಜಿನ ಪ್ರಾಂಶುಪಾಲರು, ಎನ್.ಎಸ್.ಎಸ್. ಯೋಜನಾಧಿಕಾರಿ, ನಿರ್ದೇಶಕರು ಚುನಾವಣಾ ಸಾಕ್ಷರತಾ ಕ್ಲಬ್, ರೆಡ್ ರಿಬ್ಬನ್ ಕ್ಲಬ್, ಯುವ ರೆಡ್ ಕ್ರಾಸ್ ಘಟಕ, ಗ್ರಾಹಕ ಕ್ಲಬ್ ಹಾಗೂ ಎಲ್ಲಾ ಬೋಧಕ ಬೋಧಕೇತರ ಸಿಬ್ಬಂದಿಯವರು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *