ಸುದ್ದಿ9:ಬಂಟ್ವಾಳ:ಪರಿಸರ ರಕ್ಷಣೆ ಎಂಬುದು ಪ್ರತಿಯೊಬ್ಬರ ಹೊಣೆಗಾರಿಕೆ ಮತ್ತು ಕರ್ತವ್ಯವೂ ಆಗಿದ್ದು, ಪ್ರಾಕೃತಿಕ ಸಮತೋಲನ ಕಾಯ್ದುಕೊಂಡು ಹವಾಮಾನ ವೈಪರೀತ್ಯದಿಂದ ರಕ್ಷಣೆ ಸಿಗಲು ಕೂಡಾ ಅರಣ್ಯ ಉಳಿಸಿ ಬೆಳೆಸುವ ಮಹತ್ತರ ಜವಾಬ್ದಾರಿ ನಮ್ಮೆಲ್ಲರಿಗೆ ಇದೆ ಎಂದು ಜಿಲ್ಲಾ ಉಸ್ತುವಾರಿ ಮತ್ತು ಅರಣ್ಯ ಸಚಿವ ಬಿ. ರಮಾನಾಥ ರೈ ಹೇಳಿದ್ದಾರೆ.
ತಾಲ್ಲೂಕಿನ ಸಿದ್ಧಕಟ್ಟೆ ಸಂತ ಪ್ಯಾಟ್ರಿಕ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ನಡೆದ ಅಕ್ಷರ ದಾಸೋಹ ಕಟ್ಟಡ ಮತ್ತು ನಳ್ಳಿ ನೀರಿನ ಯೋಜನೆ ಕಾಮಗಾರಿ ಉದ್ಘಾಟಿಸಿ ಅವರು ಮಾತನಾಡಿದರು.
ಇದೇ ವೇಳೆ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಮುಖ್ಯಶಿಕ್ಷಕ ಕೆ.ರಮೇಶ ನಾಯಕ್ ರಾಯಿ ಇವರನ್ನು ಸಚಿವರು ಸನ್ಮಾನಿಸಿ, ಶಾಲಾ ಆವರಣದಲ್ಲಿ ಗಿಡ ನೆಡುವ ಮೂಲಕ ವನಮಹೋತ್ಸವಕ್ಕೆ ಚಾಲನೆ ನೀಡಿದರು.
ಕೆಥೋಲಿಕ್ ಶಿಕ್ಷಣ ಮಂಡಳಿ ಕಾರ್ಯದಶರ್ಿ ಧರ್ಮಗುರು ಜೆರಾಲ್ಡ್ ಡಿಸೋಜ ಅವರು ಆಶೀರ್ವಚನ ನೀಡಿದರು. ಶಾಲಾ ಸಂಚಾಲಕ ಧರ್ಮಗುರು ಆ್ಯಂಟನಿ ಲಸ್ರಾದೊ, ಬಂಟ್ವಾಳ ತಾ.ಪಂ. ಅಧ್ಯಕ್ಷ ಯಶವಂತ ಡಿ., ಜಿ.ಪಂ.ಸದಸ್ಯೆ ನಳಿನಿ ಬಿ.ಶೆಟ್ಟಿ , ತಾ.ಪಂ.ಸದಸ್ಯೆ ರೇವತಿ ಆರ್. ಪೂಜಾರಿ, ಕ್ಷೇತ್ರ ಶಿಕ್ಷಣಾಧಿಕಾರಿ ಶೇಷಶಯನ ಕಾರಿಂಜ, ಅಕ್ಷರ ದಾಸೋಹ ಸಹಾಯಕ ನಿದರ್ೇಶಕ ಶ್ರೀಕಾಂತ್, ಕೆರೆಬಳಿ ಕ್ಲಸ್ಟರ್ ಸಿಆರ್ಪಿ ಕುಮಾರ್ ಡಿ., ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಆ್ಯಂಟನಿ ಡಿಸೋಜ ಮತ್ತಿತರರು ಇದ್ದರು.
ಮುಖ್ಯಶಿಕ್ಷಕಿ ರೀಟಾ ತಾವ್ರೊ ಸ್ವಾಗತಿಸಿ, ಲೀನಾ ವಂದಿಸಿದರು. ಶಿಕ್ಷಕಿ ಆ್ಯಗ್ನೆಸ್ ಡಿಸೋಜ ಕಾರ್ಯಕ್ರಮ ನಿರೂಪಿಸಿದರು.
