ಸುದ್ದಿ9 ಬಂಟ್ವಾಳ : ಶ್ರೀ ಕ್ಷೇ.ಧ.ಗ್ರಾ.ಯೋ.ಬಂಟ್ವಾಳ ವಲಯ ಹಾಗೂ ಬಂಟ್ವಾಳ ಅಖಿಲ ಕನರ್ಾಟಕ ಜನಜಾಗೃತಿ ವೇದಿಕೆ ಇದರ ಮಾರ್ಗದರ್ಶನದಲ್ಲಿ ನವಜೀವನ ಸಮಿತಿ ಸದಸ್ಯರಿಗೆ ಪ್ರೇರಣಾ ಶಿಬಿರ ಕಾಡಬೆಟ್ಟು ಶ್ರೀ ಶಾರದಾಂಬ ಭಜನ ಮಂದಿರದಲ್ಲಿ ಜರಗಿತು.
ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಕಿರಣ್ ಹೆಗ್ಡೆ ಅವರು ಶಿಬಿರ ಉದ್ಘಾಟಿಸಿ ಮಾತನಾಡಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆ ಅವರ ಆಶಯದಂತೆ ಜನಜಾಗೃತಿ ವೇದಿಕೆಯಿಂದ ಪಾನಮುಕ್ತ ಸಮಾಜದ ನಿರ್ಮಾಣದ ಆಶಯ ಪರಿಪೂರ್ಣಗೊಳ್ಳಬೇಕು. ಪಾನಮುಕ್ತರು ನವಜೀವನ ಸಮಿತಿಯ ಸದಸ್ಯರಾಗಿ ಇತರರಿಗೆ ಮಾದರಿಯಾಗಿರಬೇಕು ಎಂದು ಹೇಳಿದರು. ವಲಯ ಜನಜಾಗೃತಿ ವೇದಿಕೆ ಅಧ್ಯಕ್ಷ ಪ್ರಮೋದ್ ಕುಮಾರ್ ಅವರು ಅಧ್ಯಕ್ಷತೆ ವಹಿಸಿದ್ದರು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಯೋಜನಾಕಾರಿ ತಿಮ್ಮಯ್ಯ ಅವರು ಮಾಹಿತಿ ನೀಡಿ ನವಜೀವನ ಸದಸ್ಯರು ಸಮಾಜದಲ್ಲಿ ಗುರುತಿಸುವಂತಹ ಕೆಲಸವನ್ನು ಮಾಡಬೇಕು. ಜನಜಾಗೃತಿ ಕಾರ್ಯಕ್ರಮದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಕೆಲಸ ಮಾಡಬೇಕು ಎಂದು ಹೇಳಿದರು. ವಲಯ ಜನಜಾಗೃತಿ ಗೌರವಾಧ್ಯಕ್ಷ ಪಿ.ಜಿನರಾಜ ಆರಿಗ, ಉಪಾಧ್ಯಕ್ಷ ಮಾಣಿಕ್ಯರಾಜ್ ಜೈನ್, ಮಾಜಿ ಅಧ್ಯಕ್ಷ ಕೆ.ಮಾಯಿಲಪ್ಪ ಸಾಲಿಯಾನ್, ತಾಲೂಕು ಜನಜಾಗೃತಿ ವೇದಿಕೆ ಸದಸ್ಯ ವಾಸುದೇವಾಡಿಗ ಉಪಸ್ಥಿತರಿದ್ದರು.
ಕಿರಣ್ ಅವರು ಸ್ವಾಗತಿಸಿದರು. ಉಮೇಶ್ ವಂದಿಸಿದರು. ವಗ್ಗ ವಲಯ ಮೇಲ್ವಿಚಾರಕ ವಸಂತ ಸಾಲಿಯಾನ್ ಕಾರ್ಯಕ್ರಮ ನಿರೂಪಿಸಿದರು.
