ಮೂಡುಬಿದಿರೆ: ಇನ್ನರ್‍ವ್ಹೀಲ್ ಕ್ಲಬ್ ವತಿಯಿಂದ ಕಲ್ಲಬೆಟ್ಟು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಬರೆಯುವ ಪುಸ್ತಕಗಳನ್ನು ಅಧ್ಯಕ್ಷೆ ಜ್ಯೋತಿ ಪೈ ವಿತರಿಸಿದರು.

innerwheel club
ಬಳಿಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಆರ್ಥಿಕವಾಗಿ ಹಿಂದುಳಿದಿರುವ ವಿದ್ಯಾರ್ಥಿಗಳಿಗೆ ಈ ಸೌಲಭ್ಯವನ್ನು ಒದಗಿಸಿರುವುದು ಪುಣ್ಯದ ಕೆಲಸ. ವಿದ್ಯಾರ್ಥಿಗಳು ಕಲಿಕೆ ಮತ್ತು ಶಿಸ್ತಿನ ಜೀವನವನ್ನು ವೃದ್ಧಿಸಿಕೊಳ್ಳಬೇಕು ಎಂದರು.
ಮುಖ್ಯ ಶಿಕ್ಷಕ ವಿನಯಕುಮಾರ ಎಂ. ಮಾತನಾಡಿ, ಮಕ್ಕಳ ಬದುಕಿನ ಚಿಂತನೆಗಳು ಮತ್ತು ಶೈಕ್ಷಣಿಕವಾಗಿ ವಿದ್ಯಾರ್ಥಿಗಳು ಬೆಳವಣಿಗೆ ಸಾಧಿಸುವ ವಿಚಾರವಾಗಿ ಮಕ್ಕಳಿಗೆ ಕಿವಿಮಾತು ಹೇಳಿದರು. ಕಲಿಕೆಗೆ ಪ್ರೋತ್ಸಾಹ ನೀಡಿದವರನ್ನು ಗೌರವಿಸುವುದು ಉತ್ತಮ ಬೆಳವಣಿಗೆ ಎಂದರು.
ಶಿಕ್ಷಕಿ ಪ್ರತಿಭಾ ಎಂ.ಪಿ. ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಉಷಾ ವಂದಿಸಿದರು.

By suddi9

Leave a Reply

Your email address will not be published. Required fields are marked *