ಬಂಟ್ವಾಳ:ಶೈಕ್ಷಣಿಕ ಗುಣಮಟ್ಟದ ಜತೆ ಭೌತಿಕ ವಿನ್ಯಾಸ ಅಳವಡಿಸಿಕೊಂಡು ಸರ್ಕಾರಿ ಶಾಲೆ ಉಳಿಸುವಲ್ಲಿ ನಾಗರಿಕರು ಕೈ ಜೋಡಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಹೇಳಿದ್ದಾರೆ.ಇಲ್ಲಿನ ಮಂಚಿ ಸರ್ಕಾರಿ ಪ್ರೌಢಶಾಲೆಯಲ್ಲಿ ನಿರ್ಮಾಣಗೊಂಡ ನೂತನ ಕೊಠಡಿಗಳು ಮತ್ತು ವಿದ್ಯಾರ್ಥಿ ಸಂಘಟನೆಯನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು.

10btl-Manchi
ಸ್ಥಳೀಯ ಜಿಲ್ಲಾ ಪಂಚಾಯಿತಿ ಸದಸ್ಯ ಎಂ.ಎಸ್. ಮಹಮ್ಮದ್ ಕಟ್ಟಡದ ನೀಲನಕ್ಷೆ ಅನಾವರಣಗೊಳಿಸಿ ಶುಭ ಹಾರೈಸಿದರು.ಇದೇ ವೇಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಪ್ರಮಾಣ ವಚನ ಸ್ವೀಕರಿಸಿದರು. ನೂತನ ಶಾಲಾಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಪ್ರವೀಣ್ ಕೊಟ್ಟಾರಿ ಇವರನ್ನು ಅಭಿನಂದಿಸಲಾಯಿತು. ಬಂಟ್ವಾಳ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಚಂದ್ರಹಾಸ ಕರ್ಕೇರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಉಪಾಧ್ಯಕ್ಷ ಅಬ್ಬಾಸ್ ಆಲಿ, ಕೊಳ್ನಾಡು ಗ್ರಾಮ ಪಂಚಾಯಿತಿ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ, ಸದಸ್ಯರಾದ ಐರಿನ್ ಡಿ’ಸೋಜ, ಮಂಚಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಮೋಹನ್ದಾಸ್ ಶೆಟ್ಟಿ ಪುದ್ದೊಟ್ಟು ಮತ್ತಿತರರು ಇದ್ದರು.

ಮುಖ್ಯಶಿಕ್ಷಕ ವಿ. ಶ್ರೀರಾಮ ಮೂರ್ತೆ  ಪ್ರಾಸ್ತಾವಿಕ ಮಾತನಾಡಿದರು. ಹಿಂದಿ ಭಾಷಾ ಶಿಕ್ಷಕಿ ಶಾಂತಾ ಎಸ್. ಸ್ವಾಗತಿಸಿ, ಗಣಿತ ಶಿಕ್ಷಕಿ ಸುಮಿತ್ರ ವಂದಿಸಿದರು. ಕಲಾಶಿಕ್ಷಕ ವಿಶಾಂತ್ ಮಾರ್ಕ್  ಡಿ’ಸೋಜ ಕಾರ್ಯಕ್ರಮ ನಿರೂಪಿಸಿದರು.

By suddi9

Leave a Reply

Your email address will not be published. Required fields are marked *