ಬಂಟ್ವಾಳ:ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭಾನುವಾರ ಆಗಮಿಸಿದ ಸಚಿವ ಎಚ್.ಡಿ.ರೇವಣ್ಣ ಅವರು, ವರದಿಗೆಂದು ತೆರಳಿದ್ದ ಮೂಲ್ಕಿ ವಲಯ ಪತ್ರಕರ್ತರ ಸಂಘದ ಅಧ್ಯಕ್ಷ ನಿಶಾಂತ್ ಕಿಲೆಂದೂರು ಅವರೊಂದಿಗೆ ವರ್ತಿಸಿದ ರೀತಿ ಪತ್ರಿಕಾ ಸಮುದಾಯಕ್ಕೆ ಮಾಡಿದ ಅವಮಾನವಾಗಿದೆ, ಇದನ್ನು ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಖಂಡಿಸುತ್ತದೆ.ಮುಂದೆ ಈ ರೀತಿ ಆಗದಂತೆ ಕ್ರಮ ಕೈಗೊಳ್ಳಬೇಕು, ಸಚಿವರು ಪತ್ರಿಕಾ ಸಮುದಾಯದ ಕ್ಷಮೆ ಯಾಚಿಸಬೇಕು ಹಾಗೂ ಪತ್ರಕರ್ತರಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಸಂಘ ಒತ್ತಾಯಿಸುತ್ತದೆ

By suddi9

Leave a Reply

Your email address will not be published. Required fields are marked *